ದಸರಾ ವಸ್ತು ಪ್ರದರ್ಶನ ಜ.7ರವರೆಗೆ ಮುಂದುವರಿಕೆ
ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಯಷ್ಟೇ ಪ್ರಸಿದ್ಧವಾದದ್ದು ದಸರಾ ವಸ್ತು ಪ್ರದರ್ಶನ. ಹತ್ತು ದಿನಗಳ ದಸರೆಯ ಉತ್ಸವ ಮುಗಿದರೂ ತಿಂಗಳುಗಟ್ಟಲೆ ಜನಾಕರ್ಷಣೆಯ ಕೇಂದ್ರವಾಗಿ ವಿಜೃಂಭಿಸುವ ದಸರಾ ವಸ್ತುಪ್ರದರ್ಶನ ಈ ಬಾರಿ ವಿಳಂಬವಾಗಿ ಆರಂಭಗೊಂಡಿತು.
ಈ ಹಿನ್ನೆಲೆಯಲ್ಲಿ ಪ್ರದರ್ಶನವನ್ನು ಜನವರಿ 7ನೇ ತಾರೀಖಿನವರೆಗೂ ಮುಂದುವರಿಸಲು ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರ ತೀರ್ಮಾನ ಕೈಗೊಂಡಿದೆ. ಈ ವಿಷಯವನ್ನು ಪ್ರಾಧಿಕಾರದ ಅಧ್ಯಕ್ಷ ಎಸ್. ಪುಟ್ಟಸ್ವಾಮಿ ಅವರು ಇಲ್ಲಿ ತಿಳಿಸಿದ್ದಾರೆ.
ರಾಜ್ಕುಮಾರ್ ಅವರ ಅಪಹರಣ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನದ ಆರಂಭದಲ್ಲಿ ವಿಳಂಬವಾಗಿದ್ದರೆ, ಮೈಸೂರಿನಲ್ಲಿ ಸತತವಾಗಿ ಸುರಿದ ಮಳೆಯಿಂದ ವಸ್ತು ಪ್ರದರ್ಶನದ ಲಾಭ ಸಾರ್ವಜನಿಕರಿಗೆ ಸೂಕ್ತರೀತಿಯಲ್ಲಿ ದೊರಕಲಿಲ್ಲ. ಮಿಗಿಲಾಗಿ ಪ್ರೇಕ್ಷಕರ ಸಂಖ್ಯೆ ಗಣನೀಯವಾಗಿ ಇಳಿದ ಕಾರಣ, ಮಳಿಗೆಗಳ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರು ವಸ್ತು ಪ್ರದರ್ಶನವನ್ನು ಮುಂದುವರಿಸಲೇ ಬೇಕು ಎಂದು ಮನವಿ ಮಾಡಿದ್ದರು.
ಮಳಿಗೆದಾರರ ಮನವಿಯನ್ನು ಪುರಸ್ಕರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರದರ್ಶನದ ಉತ್ತಮ ಮಳಿಗೆಗೆ ಬಹುಮಾನ ನೀಡಿ ಮಾತನಾಡುತ್ತಿದ್ದ ಅವರು, ರಂಜಾನ್ ಹಾಗೂ ಕ್ರಿಸ್ಮಸ್ ಹಬ್ಬಗಳೂ ಇರುವ ಹಿನ್ನೆಲೆಯಲ್ಲಿ ಪ್ರದರ್ಶನ ಮುಂದುವರಿಸಲಾಗಿದೆ ಎಂದೂ ತಿಳಿಸಿದರು.
ಮುಖಪುಟ / ಊರು ಕೇರಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications