ಸಂಸತ್ನಲ್ಲಿ ಬ್ಯಾಂಕಿಂಗ್ ಮಸೂದೆ ಮಂಡನೆ : ಲೋಕಸಭೆಯಲ್ಲಿ ಗದ್ದಲ
ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ಸರಕಾರದ ಪಾಲನ್ನು ಕಡಿಮೆ ಮಾಡುವ ಹೊಸ ಬ್ಯಾಂಕಿಂಗ್ ಮಸೂದೆಯನ್ನು ಹಣಕಾಸು ಸಚಿವ ಯಶವಂತ ಸಿನ್ಹಾ ಬುಧವಾರ ಸಂಸತ್ನಲ್ಲಿ ಮಂಡಿಸಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ಈಗಿರುವ ಸರಕಾರದ ಶೇಕಡಾ 51ರಷ್ಟು ಪಾಲನ್ನು 33ಕ್ಕೆ ಇಳಿಸುವ ಸರಕಾರದ ಪ್ರಸ್ತಾವಕ್ಕೆ ಸಿಪಿಐಎಂನ ಬಸುದೇವ್ ಆಚಾರ್ಯ ಸೇರಿದಂತೆ ಇತರ ಸದಸ್ಯರು ಒಕ್ಕೊರಲಿನಿಂದ ವಿರೋಧಿಸಿದರು.
ಸರಕಾರದ ಪಾಲನ್ನು ಕಡಿತಗೊಳಿಸುವ ಸರಕಾರದ ಕ್ರಮ ಸಂವಿಧಾನ ವಿರೋಧಿಕ್ರಮ ಎಂದು ಬಣ್ಣಿಸಿದ ಸದಸ್ಯರು, ರಾಷ್ಟ್ರೀಯ ಸಂಪತ್ತನ್ನು ಮಾರಲು ಆತುರ ತೋರಬಾರದು ಎಂದು ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಸಿದರು. ಸರಕಾರದ ಶೇರುಗಳನ್ನು ಕಡಿತಗೊಳಿಸುವ ನಿರ್ಧಾರ ದೇಶದ ಸಂಪತ್ತನ್ನು ಮಾರುವ ವಿಷಯಕ್ಕೆ ಸಂಬಂಧಿಸಿದ್ದಲ್ಲ. ಈ ನಿರ್ಧಾರವನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ. ಮಸೂದೆ ಮಂಡನೆ ದಿಢೀರ್ ತೆಗೆದುಕೊಂಡಿರುವ ನಿರ್ಧಾರವಲ್ಲ , ಈ ಬಗ್ಗೆ ಪ್ರತಿ ಸದಸ್ಯರಿಗೂ ನೊಟೀಸ್ ಜಾರಿ ಮಾಡಲಾಗಿದೆ ಎಂದು ಸಿನ್ಹಾ ಸಮರ್ಥಿಸಿಕೊಂಡರು.
ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ಸರಕಾರದ ಪಾಲು ಕಡಿತಗೊಳಿಸಬೇಕೆಂದು ನರಸಿಂಹ ಸಮಿತಿ ಶಿಫಾರಸು ಮಾಡಿದೆ. ಈ ಸಂಬಂಧ ನಿರ್ಧಾರವನ್ನು ಆಗಿನ ಚಂದ್ರಶೇಖರ್ ಸರಕಾರ ತೆಗೆದುಕೊಂಡಿತ್ತು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಚಂದ್ರಶೇಖರ್ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ ಮಾತ್ರ ಶೇರು ಖರೀದಿಗೆ ಅವಕಾಶ ನೀಡಲು ಆಗ ನಿರ್ಧರಿಸಲಾಗಿತ್ತು. ಬ್ಯಾಂಕುಗಳನ್ನು ಖಾಸಗಿ ವಲಯಕ್ಕೆ ಬಿಟ್ಟುಕೊಡುವ ನಿರ್ಧಾರ ಮಾಡಿರಲಿಲ್ಲ ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications