ವಿಶ್ವದ ಅತಿ ದೊಡ್ಡ ಹೃದಯ ಚಿಕಿತ್ಸೆ ಆಸ್ಪತ್ರೆ ಬೆಂಗಳೂರಿನಲ್ಲಿ ತಲೆಯೆತ್ತಲಿದೆ
ಬೆಂಗಳೂರು : ವಿಶ್ವದ ಅತ್ಯಂತ ದೊಡ್ಡ ಹೃದಯ ಚಿಕಿತ್ಸೆ ಆಸ್ಪತ್ರೆ ಬೆಂಗಳೂರಿನಲ್ಲಿ ತಲೆಯೆತ್ತಲಿದ್ದು, ಮುಂದಿನ ವರ್ಷದ ಜನವರಿ ತಿಂಗಳ ಕೊನೆಗೆ ಆಸ್ಪತ್ರೆ ಆರಂಭವಾಗಲಿದೆ.
ರವೀಂದ್ರನಾಥ್ ಠಾಗೋರ್ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸಾೖನ್ಸಸ್‌ನ ಅಧ್ಯಕ್ಷ ಡಾ. ದೇವಿ ಶೆಟ್ಟಿ ಈ ವಿಷಯವನ್ನು ಮಂಗಳವಾರದಂದು ತಿಳಿಸಿದ್ದಾರೆ. ಅವರು ಸಾಮಾಜಿಕ ಕ್ಷೇಮದ ಬಗ್ಗೆ ಕಾರ್ಪೊರೇಟ್ ಜಗತ್ತಿನ ಜವಾಬ್ದಾರಿಗಳು ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತಿದ್ದರು.
ಏಷ್ಯಾ ಹಾರ್ಟ್ ಫೌಂಡೇಷನ್ ಈ ಹೊಸ ಆಸ್ಪತ್ರೆಯನ್ನು ಆರಂಭಿಸಲಿದ್ದು, ಆಸ್ಪತ್ರೆಗೆ ನಾರಾಯಣ ಆಸ್ಪತ್ರೆ ಎಂದು ಹೆಸರಿಡಲಾಗುವುದು. ಒಂದು ದಿನದಲ್ಲಿ 25 ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ಸಾಮರ್ಥ್ಯವಿರುವ ಈ ಆಸ್ಪತ್ರೆಯಲ್ಲಿ 700 ಹಾಸಿಗೆಗಳಿರುತ್ತವೆ. ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ದೇವಿ ಶೆಟ್ಟಿ ವಿವರಿಸಿದರು.
ದೇಶದ ಏಳು ಈಶಾನ್ಯ ರಾಜ್ಯಗಳಿಗೆ ಟೆಲಿಮೆಡಿಸಿನ್ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆ ಕೂಡ ಏಷ್ಯಾ ಹಾರ್ಟ್ ಫೌಂಡೇಷನ್ ಮುಂದೆ ಇದ್ದು, ತಂತ್ರಜ್ಞಾನಕ್ಕಾಗಿ ಇಸ್ರೋವನ್ನು ಸಂಪರ್ಕಿಸಲಾಗಿದೆ . ಭಾರತದಲ್ಲಿ ವರ್ಷಕ್ಕೆ 20 ಲಕ್ಷ ಹೃದಯ ಶಸ್ತ್ರ ಚಿಕಿತ್ಸೆಗಳನ್ನು ನಡೆಸಬೇಕಾದ ಅಗತ್ಯವಿದೆ. ಆದರೆ ಕೇವಲ 45 ಸಾವಿರ ಶಸ್ತ್ರ ಚಿಕಿತ್ಸೆ ನಡೆಸುವುದು ಸಾಧ್ಯವಾಗುತ್ತಿದೆ. ಈ ಅಂತರವನ್ನು ಕುಗ್ಗಿಸಲು ಹಾರ್ಟ್ ಫೌಂಡೇಷನ್, ಪ್ರತಿ ರಾಜ್ಯದ ರಾಜಧಾನಿಯಲ್ಲಿ ಹೃದ್ರೋಗ ಆಸ್ಪತ್ರೆಗಳನ್ನು ತೆರೆಯಲು ಉದ್ದೇಶಿಸಿದೆ ಎಂದು ಡಾ. ಶೆಟ್ಟಿ ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications