ಇಂದಿರಾನಗರದಲ್ಲಿ ಇಬ್ಬರು ತರುಣರ ಭೀಕರ ಕೊಲೆ
ಬೆಂಗಳೂರು : ಇಂದಿರಾನಗರ ಚಿನ್ಮಯ ಮಿಷನ್ ರಸ್ತೆಯ ಮಂಜುನಾಥ ಕಾಂಪ್ಲೆಕ್ಸ್ನ ರೂಂನಲ್ಲಿ ಮಲಗಿದ್ದ ಎಸ್ಟಿಡಿ ಬೂತ್ ಒಂದನ್ನು ನಿರ್ವಹಿಸುತ್ತಿದ್ದ ವ್ಯಕ್ತಿ ಹಾಗೂ ಆತನ ಗೆಳೆಯನ ಮೇಲೆ ದೊಡ್ಡ ಗಾತ್ರದ ಕಲ್ಲುಗಳನ್ನು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಕೊಲೆಯಾಗಿರುವ ವ್ಯಕ್ತಿಗಳನ್ನು ಉಡುಪಿಯ ಪ್ರವೀಣ (30) ಹಾಗೂ ಆತನ ಗೆಳೆಯ ಸುಧಾಕರ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಕೊಲೆಗೆ ಪ್ರೇಮ ಪ್ರಕರಣ ಇಲ್ಲವೇ ಅಕ್ರಮ ಸಂಬಂಧ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಯಾಗಿರುವ ಪ್ರವೀಣ ಹಾಗೂ ಸುಧಾಕರ ಶೆಟ್ಟಿ ಮಲಗಿದ್ದ ರೂಂನಲ್ಲಿ ದೊರೆತಿರುವ ಬಳೆ ಚೂರು, ಹೇರ್ಪಿನ್ ಹಾಗೂ ಹುಡುಗಿಯಾಬ್ಬಳ ಫೋಟೋ ಈ ಶಂಕೆಗೆ ಪುಷ್ಟಿ ನೀಡಿದೆ.
ಈ ಕೊಲೆ ಪ್ರಕರಣದಿಂದ ಇಂದಿರಾನಗರ ಬಡಾವಣೆಯಲ್ಲಿ ಭೀತಿಯ ವಾತಾವರಣ ಮೂಡಿದ್ದು, ನಾಗರಿಕರು ಭಯಭೀತರಾಗಿದ್ದಾರೆ. ಇಂದಿರಾನಗರ ಪೊಲೀಸರು ತನಿಖೆ ನಡೆಸುತ್ತಿದ್ದು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸ್ ಕೇಂದ್ರ ಕಚೇರಿ ತಿಳಿಸಿದೆ.
ಕೊಲೆಗೀಡಾದ ಸುಧಾಕರ ಶೆಟ್ಟಿ ಎಸ್ಟಿಡಿ ಬೂತ್ ನೋಡಿಕೊಳ್ಳುತ್ತಿದ್ದ ಪ್ರವೀಣನ ರೂಮಿಗೆ ಮಂಗಳವಾರವಷ್ಟೇ ಬಂದಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ. ರಾತ್ರಿ 12 ಗಂಟೆಯ ನಂತರ ಈ ಭೀಕರ ಕೊಲೆ ನಡೆದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications