ಅಂಚೆ ನೌಕರರ ಮುಷ್ಕರ ಕಾನೂನು ಬಾಹಿರ - ಕಾರ್ಮಿಕ ಆಯೋಗ
ನವದೆಹಲಿ : ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಂಚೆ ನೌಕರರ ಮುಷ್ಕರ ಕಾನೂನು ಬಾಹಿರವಾಗಿದ್ದು , ಮುಷ್ಕರ ನಿರತ ಸುಮಾರು ಆರು ಲಕ್ಷ ಮಂದಿ ನೌಕರರು ಕೈಗಾರಿಕಾ ಕಾನೂನು ಕಾಯ್ದೆಯಡಿ ಶಿಕ್ಷೆಗೆ ಅರ್ಹರು ಎಂದು ಎಂದು ಕಾರ್ಮಿಕ ಆಯೋಗ ಹೇಳಿದೆ.
ಈ ಕುರಿತು ನೌಕರರ ಯೂನಿಯನ್‌ನ್ನು ಉದ್ದೇಶಿಸಿದ ಕಾರ್ಮಿಕ ಆಯೋಗದ ಅಧ್ಯಕ್ಷ ಜಿ.ಆರ್. ಮಾಜ್ಹೀ ಅವರು, ನಾಳೆಯಿಂದಾದರೂ ಅಂಚೆ ನೌಕರರು ಕೆಲಸಕ್ಕೆ ಹಾಜರಾಗಬಹುದು ಎಂಬ ಭರವಸೆ ಇಟ್ಟುಕೊಂಡಿರುವುದಾಗಿ ಹೇಳಿದರು.
ಬುಧವಾರದಂದು ಸಂಪರ್ಕ ಸಚಿವ ರಾಮ್‌ವಿಲಾಸ್ ಪಾಸ್ವಾನ್, ಅಂಚೆ ನೌಕರರು ಮುಷ್ಕ-ರ ಕೈಬಿಡಬೇಕು , ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾದೀತು ಎಂದೂ ಹೇಳಿದ್ದರು. ಆದರೂ ಮುಷ್ಕರ ನಿರತರ ಮೇಲೆ ಎಸ್ಮಾ ಜಾರಿ ಮಾಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಲು ಸಚಿವರು ನಿರಾಕರಿಸಿದರು. ಈ ಕುರಿತು ಕಾನೂನು ಸಚಿವಾಲಯದೊಂದಿಗೆ ಮಾತುಕತೆ ಮುಂದುವರೆದಿದ್ದು, ಹೈಕೋರ್ಟ್ ಆದೇಶವನ್ನು ಪಾಲಿಸಲಾಗುವುದು ಎಂದು ಅವರು ಹೇಳಿದರು.
ದೆಹಲಿ ಹೈಕೋರ್ಟ್‌ನಲ್ಲಿ ಅಜಿತ್ ಪಸಾಯತ್ ಮತ್ತು ಡಿ.ಕೆ ಜೈನ್ ಅವರ ವಿಭಾಗೀಯ ಪೀಠ, ಶುಕ್ರವಾರದೊಳಗೆ ಅಂಚೆ ನೌಕರರ ಮುಷ್ಕರವನ್ನು ಇತ್ಯರ್ಥಗೊಳಿಸುವಂತೆ ಸರಕಾರಕ್ಕೆ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಸರಕಾರದ ಯಾವುದೇ ಕ್ರಮಗಳಿಗೆ ಬಗ್ಗದೆ, ತಮ್ಮ ಬೇಡಿಕೆ ಈಡೇರುವವರೆಗೆ ಧರಣಿ ನಡೆಸುವುದಾಗಿ ಮುಷ್ಕರನಿರತ ಅಂಚೆ ನೌಕರರ ಯೂನಿಯನ್ ಪ್ರಮುಖರು ಹೇಳಿದ್ದಾರೆ.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications