ರೇಸಿನಿಂದ ಹಿಂದೆ ಸರಿದ ಅಲ್ಗೋರ್, 43ನೇ ಅಧ್ಯಕ್ಷರಾಗಿ ಬುಷ್
ವಾಷಿಂಗ್ಟನ್ : ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ರೇಸಿನ ಕಣದಿಂದ ಡೆಮಾಕ್ರೆಟಿಕ್ ಪಕ್ಷದ ಅಲ್ಗೋರ್ ಹಿಂದೆ ಸರಿದಿದ್ದು, ರಿಪಬ್ಲಿಕನ್ ಪಕ್ಷದ ಜಾರ್ಜ್ ಡಬ್ಲ್ಯೂ ಬುಷ್ ಅಮೆರಿಕಾದ 43 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬುಷ್ ಅವರಿಂದ, ಕಡಿಮೆ ಅಂತರದ ಮತಗಳಿಂದ ಸೋತಿರುವ ಅಲ್ ಗೋರ್ ಅಮೆರಿಕಾದ ಉಪಾಧ್ಯಕ್ಷರಾಗಿದ್ದಾರೆ. ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅಲ್ ಗೋರ್, ಕೆಲವೇ ಕ್ಷಣಗಳ ಹಿಂದೆ ತಾವು ಅಮೆರಿಕಾದ ಅಧ್ಯಕ್ಷ ಬುಷ್ ಅವರಿಗೆ ಅಭಿನಂದನೆ ತಿಳಿಸಿರುವುದಾಗಿ ಹೇಳಿದರು. ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಾರ್ಜ್ ಬುಷ್ ಟೆಕ್ಸಾಸ್ ಲೆಜಿಸ್ಲೇಚರ್ನ ಡೆಮಾಕ್ರೆಟಿಕ್ ಕಂಟ್ರೋಲ್ಡ್ ಹೌಸ್ ಚೇಂಬರ್ನಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಲ್ಲಿನ ಪ್ರಕಟಣೆ ತಿಳಿಸಿದೆ.
ಅಲ್ಗೋರ್ ಅವರು ಔಪಚಾರಿಕವಾಗಿ ಬುಷ್ ಅವರನ್ನು ಅಭಿನಂದಿಸಿರುವುದರಿಂದ ಕಳೆದ ಐದು ವಾರಗಳ ಕಾಲ ಅಮೆರಿಕಾದಲ್ಲಿ ನಡೆದ ಕಾನೂನು ಸಮರಕ್ಕೆ ತೆರೆ ಬಿದ್ದಿದೆ. ಬುಷ್ ಅವರ ಮುನ್ನಡೆಯನ್ನೇ ಖಚಿತ ಪಡಿಸಿದ ಅಲ್ಲಿನ ಸರ್ವೋಚ್ಛ ನ್ಯಾಯಾಲಯ, ಮತಗಳ ಮರು ಕೈ ಎಣಿಕೆಯನ್ನು ನಿರಾಕರಿಸಿತ್ತು. ಇದಾದ 24 ಗಂಟೆಗಳ ನಂತರ ಅಲ್ಗೋರ್ ಅವರು ತಾವು ರೇಸಿನಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications