ನಾಗಪ್ಪನ ಪರಾರಿ ವೃತ್ತಾಂತ: ಹೊಟ್ಟೆಪಕ್ಷದ ರಂಗಸ್ವಾಮಿಅರ್ಜಿ ಇತ್ಯರ್ಥ
ಬೆಂಗಳೂರು : ವೀರಪ್ಪನ್ ಸೆರೆಯಿಂದ ಪರಾರಿಯಾಗಿ ಬಂದ ನಾಗಪ್ಪ ಅವರು ತಮ್ಮ ಪರಾರಿಯ ಹಿಂದಿನ ವಾಸ್ತವವನ್ನು ಬಹಿರಂಗಪಡಿಸಬೇಕು ಎಂದು ಕೋರಿ ಹೊಟ್ಟೆಪಕ್ಷದ ರಂಗಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಗುರುವಾರ ಇತ್ಯರ್ಥಪಡಿಸಿತು.
ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಅಶೋಕ್ ಭಾನ್ ಮತ್ತು ಎ.ವಿ. ಶ್ರೀನಿವಾಸ್ ರೆಡ್ಡಿ ಅವರ ವಿಭಾಗೀಯ ಪೀಠ ಅರ್ಜಿದಾರರು ತಮ್ಮ ಅರ್ಜಿಯನ್ನು ವಾಪಸ್ಸು ಪಡೆಯಲು ಅನುಮತಿ ನೀಡಿದರು. ನವಂಬರ್ 30 ರಂದು ನಾಗಪ್ಪ ಹಾಗೂ ಅರ್ಜಿದಾರರ ಹೇಳಿಕೆಗಳನ್ನು ನ್ಯಾಯಮೂರ್ತಿಗಳು ದಾಖಲಿಸಿಕೊಂಡಿದ್ದರು. ಕತ್ತಲೆಯಲ್ಲಿ ವೀರಪ್ಪನ್ ಅಡಗುತಾಣದಿಂದ ತಪ್ಪಿಸಿಕೊಂಡು ಬಂದುದಾಗಿ ತಿಳಿಸಿದ್ದ ನಾಗಪ್ಪ, ತಮ್ಮ ಮೇಲೆ ಯಾರೂ ಹಲ್ಲೆ ನಡೆಸಿಲ್ಲ ಹಾಗೂ ರಾಜ್ ಮಕ್ಕಳು ತಮ್ಮನ್ನು ಅಕ್ರಮ ಬಂಧನದಲ್ಲಿರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಟಾಡಾ ನ್ಯಾಯಾಧೀಶರಿಂದ ಅಧಿಕಾರ ಸ್ವೀಕಾರ : ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಮೂರ್ತಿ ಕೃಷ್ಣಪ್ಪ ಅವರು ಟಾಡಾ ವಿಶೇಷ ನ್ಯಾಯಾಧೀಶರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು ಎಂದು ನಮ್ಮ ಮೈಸೂರು ಪ್ರತಿನಿಧಿಯ ವರದಿ ತಿಳಿಸಿದೆ. ನ್ಯಾಯಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರಪ್ರಸಾದ್ ಅವರು ಕೃಷ್ಣಪ್ಪನವರಿಗೆ ಅಧಿಕಾರ ವಹಿಸಿಕೊಟ್ಟರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications