ಗ್ರಾಮೀಣಾಭಿವೃದ್ಧಿ : ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ನೆರವಿನಲ್ಲಿ ಕಡಿತ
ನವದೆಹಲಿ : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಗ್ರಾಮೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 307 ಕೋಟಿ ರುಪಾಯಿಗಳ ಯೋಜನೆಯನ್ನು ರೂಪಿಸಿದ್ದು, ಈ ನೆರವು ಈಚಿನ ವರ್ಷಗಳಲ್ಲಿ ಅತ್ಯಂತ ಕಡಿಮೆಯದಾಗಿದೆ.
ಕರ್ನಾಟಕಕ್ಕೆ ಕೇಂದ್ರದ ನೆರವಿನ ಕುರಿತು ಸಂಸದ ಜಿ. ಎಸ್.ಬಸವರಾಜು ಅವರ ಪ್ರಶ್ನೆಗೆ ಗುರುವಾರ ಸಂಸತ್ತಿನಲ್ಲಿ ಉತ್ತರಿಸಿದ ಗ್ರಾಮೀಣ ಅಭಿವೃದ್ಧಿ ಖಾತೆ ಸಚಿವ ಎಂ. ವೆಂಕಯ್ಯ ನಾಯ್ಡು , ಕೇಂದ್ರದ ನೆರವಿನಿಂದ ಈಗಾಗಲೇ 307 ಕೋಟಿ ರುಪಾಯಿಗಳ ಯೋಜನೆ ರೂಪಿಸಲಾಗಿದೆ. ನೆರವಿನ ಮೊತ್ತ ಹೆಚ್ಚಿಸುವಂತೆ ಕೋರುವ ಯಾವುದೇ ಪ್ರಸ್ತಾವನೆ ಈವರೆಗೆ ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ಬಂದಿಲ್ಲ ಎಂದರು.
ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗಾಗಿ 1997-98 ರಲ್ಲಿ 407 ಕೋಟಿ, 1998-99 ರಲ್ಲಿ 417 ಕೋಟಿ ಹಾಗೂ 1999-2000 ಸಾಲಿನಲ್ಲಿ 352 ಕೋಟಿ ರುಪಾಯಿಗಳನ್ನು ನೀಡಲಾಗಿತ್ತು . ಆದರೆ, ಪ್ರಸಕ್ತ ಸಾಲಿನಲ್ಲಿ ಕೇಂದ್ರದ ನೆರವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ವರ್ಷದಿಂದ ವರ್ಷಕ್ಕೆ ನೆರವಿನ ಪ್ರಮಾಣ ಹೆಚ್ಚಾಗುವುದು ಸಹಜ. ಆದರೆ, ಕರ್ನಾಟಕದ ಮಟ್ಟಿಗೆ ಪರಿಸ್ಥಿತಿ ಉಲ್ಟಾ ಆಗಿದ್ದು, ಇದರ ಬಗ್ಗೆ ರಾಜ್ಯ ಸರ್ಕಾರ ಈವರೆಗೆ ಯಾವುದೇ ಪ್ರತಿಭಟನೆ ಸಲ್ಲಿಸದಿರುವುದು ಅಚ್ಚರಿ ಹುಟ್ಟಿಸುತ್ತದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications