ಗೋಡೆ ವಿವಾದ : ಘರ್ಷಣೆಯ ಉರಿಯಲ್ಲಿ ಬೇಯುತ್ತಿರುವ ಬೀದರ್
ಬೀದರ್ : ಇಲ್ಲಿನ ಲೇಬರ್ ಕಾಲೋನಿಯ ಚರ್ಚ್ನ ಸುತ್ತಲೂ ರಕ್ಷಣಾ ಗೋಡೆ ನಿರ್ಮಾಣ ಸಂಬಂಧ ಎರಡು ಗುಂಪುಗಳ ನಡುವಿನ ವಿವಾದ ಶುಕ್ರವಾರ ಘರ್ಷಣೆಗೆ ತಿರುಗಿದಾಗ ಪೊಲೀಸರು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಿಸಿದರು.
ಕಳೆದ ಒಂದು ವಾರದಿಂದ ಚರ್ಚ್ಗೆ ಸಂಬಂಧಿಸಿದಂತೆ ವಾದ ವಿವಾದಗಳು ನಡೆಯುತ್ತಿದ್ದು, ಶುಕ್ರವಾರ ಬೆಳಿಗ್ಗೆ ಕಾಲೋನಿಯ ಒಂದು ಕೋಮಿನವರು ಚರ್ಚ್ನ ಸುತ್ತಲೂ ಗೋಡೆ ನಿರ್ಮಿಸಲಾರಂಭಿಸಿದಾಗ ಅದೇ ಕಾಲೋನಿಯಲ್ಲಿನ ಇನ್ನೊಂದು ಕೋಮಿನ ನಿವಾಸಿಗಳು ಕಾಮಗಾರಿಯನ್ನು ತಡೆಯಲು ಯತ್ನಿಸಿದರು. ಆಗ ನಡೆದ ಬಿಸಿ ಚರ್ಚೆ ಘರ್ಷಣೆಗೆ ತಿರುಗಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದ್ದು, ಡಿಎಸ್ಪಿ ಸಿ ದ್ರಾಮಪ್ಪ ಸೇರಿದಂತೆ ಒಟ್ಟು 12 ಮಂದಿಗೆ ಗಾಯವಾಗಿರುವುದಾಗಿ ವರದಿಯಾಗಿದೆ.
ಅಲ್ಲಿನ ಕ್ರಿಶ್ಚಿಯನ್ನರ ಪ್ರಕಾರ, 1986ರಲ್ಲಿ ಕಾಮಗಾರಿಗೆ ಅನುಮತಿ ಸಿಕ್ಕಿದೆ. ಆದರೆ ಇನ್ನೊಂದು ಕೋಮಿನವರ ಪ್ರಕಾರ ಚರ್ಚ್ ಪಕ್ಕ ಗಣಪತಿ ಮೂರ್ತಿ ಇದ್ದು, ಅಲ್ಲಿನ ಮೂರ್ತಿ ಮತ್ತು ಧ್ವಜ ಕಿತ್ತು ಎಸೆದಿದ್ದಾರೆ ಎಂದು ಆಪಾದಿಸಿದ್ದಾರೆ. ತೀವ್ರವಾಗುತ್ತಿದ್ದ ಘರ್ಷಣೆಯನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಕೆ. ಸಿಂಗ್ ಹೆಚ್ಚುವರಿ ವರಿಷ್ಠಾಧಿಕಾರಿ ಡಿ. ಪ್ರಕಾಶ್ ಸ್ಥಳಕ್ಕೆ ಧಾವಿಸಿದ್ದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications