ತಲಪಾಡಿ - ಬೈಂದೂರು ಚತುಷ್ಪಥ ರಸ್ತೆ - ರಾಜ್ಯ ಪರಿಶೀಲನೆ : ಮೊಯ್ಲಿ
ಮಂಗಳೂರು : ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನಿಂದ 285 ಕೋಟಿ ರುಪಾಯಿ ನೆರವು ಪಡೆಯಲು ರಾಜ್ಯ ಸರಕಾರ ತನ್ನ ಅಂಗೀಕಾರ ನೀಡಿದೆ. ಬಂದರು ಹಾಗೂ ಮೀನುಗಾರಿಕೆ ಸಚಿವ ಬಿ. ರಾಮನಾಥ ರೈ ಈ ವಿಷಯ ಪ್ರಕಟಿಸಿದ್ದಾರೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ವಹಿಸಲಾದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಾಮನಾಥ ರೈ ಅವರು, ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಅತ್ಯಂತ ತ್ವರಿತ ಗತಿಯಲ್ಲಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯ ಪಥದಲ್ಲಿ ನಾಗಾಲೋಟದಿಂದ ಸಾಗುತ್ತಿರುವ ನಗರ ಮಂಗಳೂರು ಎಂದು ಹೇಳಿದರು.
ಕರಾವಳಿ ತೀರದ ನಗರಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ರೂಪಿಸಿದೆ ಎಂದೂ ಅವರು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ತೆರಿಗೆ ಸುಧಾರಣೆ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ಅವರು ತಲಪಾಡಿ - ಬೈಂದೂರು ನಡುವಿನ ನಾಲ್ಕು ದಾರಿಗಳ ಯೋಜನೆ (ಚತುಷ್ಪಥ) ಯನ್ನು ಕೇಂದ್ರ ಸರಕಾರ ಕೈಗೆತ್ತಿಕೊಳ್ಳದಿದ್ದರೆ, ರಾಜ್ಯ ಸರಕಾರವೇ ಅದನ್ನು ನಿರ್ವಹಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
ಈ ಯೋಜನೆಗೆ ಆರ್ಥಿಕ ಸಮಸ್ಯೆ ಎದುರಾದರೆ, ನಿಗಮವೊಂದನ್ನು ರಚಿಸಿ, ಹಣ ಸಂಗ್ರಹಿಸಲಾಗುವುದು ಎಂದರು. ಮಂಗಳೂರಿನಲ್ಲಿ ಸ್ಥಳೀಯ ರೈಲು ಸಂಚಾರ ಯೋಜನೆಯಾಂದರ ಯೋಜನೆಯ ಬಗ್ಗೆಯೂ ಪ್ರಸ್ತಾಪಿಸಿದ ಮೊಯ್ಲಿ, ಈ ಬಗ್ಗೆ ಸಮಾಲೋಚನೆ ನಡೆಯಬೇಕು ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಶಾಸಕ ಯೋಗೀಶ್ ಭಟ್ ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಯೋಜನೆ ರಚಿಸುವಂತೆ ಸರ್ವ ಪಕ್ಷ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒತ್ತಾಯಿಸಬೇಕು ಎಂದೂ ಸಲಹೆ ಮಾಡಿದರು. ಅವರು, ಮಂಗಳಾ ಕ್ರೀಡಾಂಗಣದ ಬಳಿ 7 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಜಿಮ್ನಾಷಿಯಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಮಾಜಿ ಸಚಿವರಾದ ಬ್ಲೇಸಿಯಸ್ ಡಿಸೋಜ, ಮೂಡ ಅಧ್ಯಕ್ಷ ಕೆ. ತೇಜೋಮಯ ಅವರು ಸಮಾರಂಭದಲ್ಲಿ ಹಾಜರಿದ್ದರು. (ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications