2500 ಕೋಟಿ ರು. ಗ್ರಾಮೀಣಾಭಿವೃದ್ಧಿ ಯೋಜನೆ 25ರಂದು ಜಾರಿ
ಬೆಂಗಳೂರು: ದೇಶದ ಹಳ್ಳಿ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಿ, ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಗ್ರಾಮೀಣಭಿವೃದ್ಧಿ ಯೋಜನೆಯಾಂದನ್ನು 2500 ಕೋಟಿ ರುಪಾಯಿ ವೆಚ್ಚದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ಭಾನುವಾರ ಇಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ನಗರಾಭಿವೃದ್ಧಿಗಿಂತಲೂ ಗ್ರಾಮೀಣಾಭಿವೃದ್ಧಿಗೆ ಇಂದು ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದರು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಶಿಕ್ಷಣ ಹಾಗೂ ಸ್ವಚ್ಛತೆಗೆ ಗಮನ ನೀಡಲೇ ಬೇಕು ಎಂದೂ ಅಭಿಪ್ರಾಯಪಟ್ಟರು.
ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ 2500 ಕೋಟಿ ರುಪಾಯಿಗಳ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಇದು ಡಿಸೆಂಬರ್25ರಿಂದ ಅನುಷ್ಠಾನಕ್ಕೆ ಬರಲಿದೆ ಎಂದೂ ತಿಳಿಸಿದರು. ಗ್ರಾಮ ಪಂಚಾಯಿತಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಗ್ರಾಮ ಪಂಚಾಯಿತಿಗಳ ಸಮಸ್ಯೆಯ ಬಗ್ಗೆ ಚರ್ಚಿಸಲು ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರುಗಳ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.
ಈ ಸಂಬಂಧ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವರಾದ ಎಂ.ವೈ. ಘೋರ್ಪಡೆ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದರು ಎಂದೂ ಅವರು ಹೇಳಿದರು. ಗ್ರಾಮೀಣ ರಸ್ತೆ ಕಾಮಗಾರಿಗೆ ಕೇಂದ್ರ ಸರಕಾರವು ಆದ್ಯತೆಯ ಮೇಲೆ ಹಣ ಬಿಡುಗಡೆ ಮಾಡಲಿದೆ ಎಂದೂ ತಿಳಿಸಿದರು. ಯೋಜನೆಗೆ ಅಗತ್ಯವಾದ ಹಣವನ್ನು ಡೀಸೆಲ್ ಮೇಲಿನ ಸೆಸ್‌ನಿಂದ ಸಂಗ್ರಹಿಸುವ ಗುರಿ ಇದೆ. ಈ ಯೋಜನೆಯಡಿ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ಹಣ ಸಂಪೂರ್ಣ ಬಳಕೆ ಆಗದಿದ್ದಲ್ಲಿ , ಎರಡನೇ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದಿಲ್ಲ ಎಂದೂ ತಿಳಿಸಿದರು.
ಗ್ರಾಮೀಣ ಪ್ರದೇಶಗಳ ನಡುವೆ ಸಂಪರ್ಕ ಸಾಧ್ಯವಾಗದಿದ್ದರೆ, ಪ್ರಗತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜತೆಗೂಡಿ ದುಡಿದರೆ, ಗ್ರಾಮೀಣ ಪ್ರದೇಶದ ಏಳಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications