ಎಟಿಪಿ ಟೆನಿಸ್ ಟೂರ್ನಿ : ಪೇಸ್ - ಭೂಪತಿ ಜೋಡಿಗೆ ಸೋಲು
ಬೆಂಗಳೂರು : ಭಾರತದ ಟೆನಿಸ್ ಜೋಡಿ ಲಿಯಾಂಡರ್ ಪೇಸ್ ಹಾಗೂ ಮಹೇಶ್ ಭೂಪತಿ ಇಲ್ಲಿ ಭಾನುವಾರ ಮುಕ್ತಾಯಗೊಂಡ ಎಟಿಪಿ ವಿಶ್ವ ಡಬಲ್ಸ್ ಟೆನಿಸ್ ಚಾಂಪಿಯನ್ಷಿಪ್ನ ಫೈನಲ್ ಸೆಣಸಿನಲ್ಲಿ ಅಮೆರಿಕದ ಡೊನಾಲ್ದ್ ಜಾನ್ಸನ್ ಹಾಗೂ ದಕ್ಷಿಣ ಆಫ್ರಿಕಾದ ಪಿಯಟ್ ನಾರ್ವೆಲ್ ವಿರುದ್ಧ ಸೋಲನುಭವಿಸಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರಿಗೆ ನಿರಾಶೆಯನ್ನುಂಟು ಮಾಡಿದರು.
ಶನಿವಾರ ನಡೆದ ಪಂದ್ಯದಲ್ಲಿ ಅಪ್ರತಿಮ ಶೌರ್ಯ ಮೆರೆದು ಫೈನಲ್ ತಲುಪಿದ್ದ ಈ ಜೋಡಿ ಭಾರತಕ್ಕೆ 750,000 ಡಾಲರ್ ಮೊತ್ತದ ಗೋಲ್ಡ್ ಫ್ಲೇಕ್ ಎಟಿಪಿ ವಿಶ್ವ ಡಬಲ್ಸ್ ಪ್ರಶಸ್ತಿ ತಂದು ಕೊಡಲಿದೆ ಎಂಬ ನಿರೀಕ್ಷೆ ಹುಸಿಯಾಯಿತು.
ಇಲ್ಲಿನ ಕಬ್ಬನ್ ತೋಟದ ಕೆಎಸ್ಎಲ್ಟಿಎ ಕ್ರೀಡಾಂಗಣದಲ್ಲಿ ನಡೆದ ಫೈನಲ್ಸ್ ಪಂದ್ಯದಲ್ಲಿ ಜಾನ್ಸನ್ ಹಾಗೂ ನಾರ್ವೆಲ್ ಜೋಡಿ ಭಾರತದ ಭೂಪತಿ ಹಾಗೂ ಪೇಸ್ ಜೋಡಿಯನ್ನು 7-6 (10 -8), 6-3, 6-4ರಲ್ಲಿ ಸೋಲಿಸಿ ವೀರೋಚಿತವಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಸುಮಾರು 2ಗಂಟೆ 18 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಪಂದ್ಯ ವೀಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಈ ಸೋಲಿನೊಂದಿಗೆ ಭಾರತದ ಪ್ರಶಸ್ತಿಯ ಕನಸು ನುಚ್ಚು ನೂರಾಯಿತು. 1997, 1999ರಲ್ಲಿ ಕೂಡ ಭಾರತೀಯ ಟೆನಿಸ್ ಪಟುಗಳು ಫೈನಲ್ಸ್ ತಲುಪಿಯೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications