ನಾಡು ನುಡಿ ಪ್ರಗತಿಗೆ ನೀವೂ ಕೈ ಜೋಡಿಸಿ
ಮೈಸೂರು : ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಾತಾವರಣವನ್ನು ಬೆಳೆಸುವ ಕೆಲಸವನ್ನು ಸರ್ಕಾರವೇ ಮಾಡಲಿ ಎಂದು ಸುಮ್ಮನಾಗುವ ಬದಲು ಕನ್ನಡ ಕೆಲಸಕ್ಕೆ ಜನರೇ ಮುಂದಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅಭಿಪ್ರಾಯ ಪಟ್ಟಿದ್ದಾರೆ.
ನಾಡು ನುಡಿಯ ಬೆಳವಣಿಗೆಗಾಗಿ ತಾಲ್ಲೂಕಿಗೊಂದು ಕನ್ನಡ ಭವನವನ್ನು ನಿರ್ಮಿಸುವ ಅಗತ್ಯವಿದೆ. ಇದರಿಂದಾಗಿ ತಾಲ್ಲೂಕು ಮಟ್ಟದಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಕನ್ನಡ ಭವನಗಳ ನಿರ್ಮಾಣಕ್ಕೆ ಪ್ರತಿಯಾಬ್ಬರೂ ಮುಂದಾಗಬೇಕು. ಕನ್ನಡ ಭವನಗಳು ಜನ ಭವನಗಳಾಗಬೇಕು ಎಂದು ರಾಣಿ ಸತೀಶ್ ಹೇಳಿದರು. ಭಾನುವಾರ, ಜಿಲ್ಲಾ ಕಸಾಪದ ಸಾಹಿತ್ಯ ಭವನದ ಕಾರ್ಯಾಲಯ, ಮಿನಿ ಸಭಾಂಗಣ, ಬರಹಗಾರರ ವಸತಿ ಗೃಹ ಹಾಗೂ ನೀರಿನ ಟ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಉದ್ಘಾಟನಾ ಭಾಷಣ ಮಾಡಿದ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು, ಸಾಹಿತ್ಯಿಕವಾಗಿ ಮಾತ್ರವಲ್ಲದೆ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೂ ಕನ್ನಡಭವನಗಳ ನಿರ್ಮಾಣ ಅಗತ್ಯ ಎಂದರು. ಹಣಕಾಸು ಖಾತೆ ರಾಜ್ಯ ಸಚಿವ ಎಂ. ಶಿವಣ್ಣ , ಹಿರಿಯ ಸಾಹಿತಿ ದೇ.ಜವರೇಗೌಡ, ಶಾಸಕರಾದ ಎಚ್.ಎಸ್. ಶಂಕರಲಿಂಗೇಗೌಡ ಹಾಗೂ ಎ.ಎಸ್. ಗುರುಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications