ಕಂಪ್ಯೂಟರ್ ಜಾಲಕ್ಕೆ ಸದ್ಯದಲ್ಲಿಯೇ ಬೆಂಗಳೂರುಮೈಸೂರು ಸಾರಿಗೆ ವ್ಯವಸ್ಥೆ
ಮೈಸೂರು : ಮೈಸೂರು ಮತ್ತು ಬೆಂಗಳೂರು ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಸದ್ಯದಲ್ಲಿಯೇ ಕಂಪ್ಯೂಟರ್‌ಗೆ ಅಳವಡಿಸಲಾಗುವುದು ಎಂದು ಸಾರಿಗೆ ಸಚಿವ ಸಗೀರ್ ಅಹ್ಮದ್ ಭಾನುವಾರ ಮೈಸೂರಿನಲ್ಲಿ ಹೇಳಿದ್ದಾರೆ.
ಆರ್. ಎಸ್. ನಾಯ್ಡು ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಈ ವ್ಯವಸ್ಥೆಯು ಮೈಸೂರು ಮತ್ತು ಬೆಂಗಳೂರು ನಡುವೆ ಓಡಾಡುವ ಪ್ರತಿ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ, ಬಸ್ ಹೊರಡುವ ಮತ್ತು ತಲುಪುವ ವೇಳೆ, ಮಾರ್ಗ ಮಧ್ಯದಲ್ಲಿನ ನಿಲುಗಡೆಗಳ ಕುರಿತು ಎಲ್ಲ ಮಾಹಿತಿಯನ್ನು ಒಳಗೊಂಡಿರುತ್ತದೆ ಎಂದರು.
ಕಂಪ್ಯೂಟರೀಕೃತ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ , ಬೆಂಗಳೂರು - ಮೈಸೂರು ನಡುವಿನ ರಾಜ್ಯ ರಸ್ತೆಯಲ್ಲಿರುವ ಹೋಟಲ್ ಮತ್ತು ರೆಸ್ಟೋರೆಂಟ್‌ಗಳ ಬಗ್ಗೆ ಅಧ್ಯಯನ ನಡೆಸಲು ಪುಣೆಯ ಕೇಂದ್ರೀಯ ಸಾರಿಗೆ ಸಂಸ್ಥೆಯ ತಜ್ಞರ ಗುಂಪು ಸದ್ಯದಲ್ಲಿಯೇ ಬೆಂಗಳೂರಿಗೆ ಭೇಟಿ ನೀಡಲಿದೆ. ಹೈವೇಯಲ್ಲಿರುವ ಹೋಟೆಲ್‌ಗಳಲ್ಲಿ ಸಿಗುವ ಆಹಾರ ಪದಾರ್ಥಗಳು, ಹೋಟೆಲ್ ಮತ್ತು ವಸತಿಗೃಹಗಳಲ್ಲಿನ ಶುಚಿತ್ವ , ಶೌಚಾಲಯ ವ್ಯವಸ್ಥೆಗಳ ಬಗ್ಗೆ ಈ ಗುಂಪು ವಿವರವಾದ ಮಾಹಿತಿ ಸಂಗ್ರಹಿಸಲಿದೆ ಎಂದರು.
ಈ ಗುಂಪು ಸಲ್ಲಿಸುವ ವರದಿಯ ಆಧಾರದ ಮೇಲೆ ರಾಜ್ಯ ಸರಕಾರವು ಕೆಎಸ್‌ಆರ್‌ಟಿಸಿ ಬಸ್ಸುಗಳು ಯಾವ ಯಾವ ಹೋಟೆಲ್‌ಗಳ ಮುಂದೆ ಊಟ ಉಪಹಾರಗಳಿಗೆ ನಿಲ್ಲಬಹುದು ಮತ್ತು ಎಷ್ಟು ಹೊತ್ತು ನಿಲ್ಲಬಹುದು ಎನ್ನುವ ಬಗ್ಗೆ ಅನುಮತಿ ಪತ್ರ ನೀಡುತ್ತದೆ ಎಂದು ಸಚಿವರು ಹೇಳಿದರು. ತಮ್ಮ ಮೈಸೂರು ಭೇಟಿಯ ಸಂದರ್ಭದಲ್ಲಿ ಸಚಿವರು ಹುಣಸೂರು, ಜೈಪುರ, ಇಳ್ವಲಗಳಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣಗಳನ್ನು ಉದ್ಘಾಟಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications