Get Updates
Get notified of breaking news, exclusive insights, and must-see stories!

3 ರಾ. ಹೆದ್ದಾರಿ ಸೇರಿಸುವ ಬೈಪಾಸ್‌ ರಸ್ತೆ ಪ್ರಸ್ತಾವನೆ

ಮಂಗಳೂರು : ಮಂಗಳೂರಿನ ಮೂಲಕ ಹಾದುಹೋಗುವ ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ಪರ್ಯಾಯ ಬೈಪಾಸ್‌ ರಸ್ತೆಯಾಂದರ ನಿರ್ಮಾಣ ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾನುವಾರ ಇಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರದಲ್ಲಿ ಹೆಚ್ಚುತ್ತಿರುವ ವಾಹನ ಸಂಚಾರದ ಒತ್ತಡವನ್ನು ಕಡಿಮೆ ಮಾಡಿ ಸಂಚಾರವನ್ನು ಸುಗಮಗೊಳಿಸಲು ಹಾಗೂ ಹೆಚ್ಚುತ್ತಿರುವ ಅಪಘಾತ ಪ್ರಮಾಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದೂ ಅವರು ಹೇಳಿದರು.

ನಗರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು, ತಜ್ಞರು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಔಪಚಾರಿವಾಗಿ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಮಂಗಳೂರು ಮಹಾನಗರದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆಯಾಂದನ್ನು ತಯಾರಿಸಿ, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಈ ಬಗ್ಗೆ ತಜ್ಞರ ಸಲಹೆ ಪಡೆದು, ಚರ್ಚಿಸಿ, ವಿಚಾರ ವಿಮರ್ಶೆಯ ಬಳಿಕ ನೀಲ ನಕ್ಷೆ ತಯಾರಿಸಲಾಗುವುದು ಎಂದು ಈ ಸಚಿವರೊಂದಿಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+