ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಲು ಆಗ್ರಹ
ರಾಯಚೂರು : ಶರಣ ಕ್ರಾಂತಿಯ ಪ್ರದೇಶದಲ್ಲಿರುವ ಗುಲ್ಬರ್ಗಾ ವಿಶ್ವ ವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು, ಉತ್ತರ ಕರ್ನಾಟಕದ ಜನರ ಬಹುದಿನದ ಬೇಡಿಕೆಯಾದ ನೈಋತ್ಯ ರೇಲ್ವೆ ವಲಯ ಸ್ಥಾಪನೆ ಆಗಬೇಕು, ಹೈಕೋರ್ಟ್ ಪೀಠ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ನಿರ್ಣಯಗಳನ್ನು ಇಲ್ಲಿ ನಡೆದ 6ನೇ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಕೈಗೊಳ್ಳಲಾಗಿದೆ.
ಶರಣ ಸಾಹಿತ್ಯ ಸಂಸ್ಕೃತಿಯ ಸಂರಕ್ಷಣೆ, ಕೃಷ್ಣ ಮೇಲ್ದಂಡೆ ಯೋಜನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು, ಕಿತ್ತೂರಿ ರಾಣಿ ಚೆನ್ನಮ್ಮ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸ್ಥಾಪಿಸಬೇಕು, ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಎಸ್. ನಿಜಲಿಂಗಪ್ಪನವರ ಪ್ರತಿಮೆ ಸ್ಥಾಪಿಸಬೇಕು ಎಂದೂ ಶರಣಾಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ಗೊ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನದಲ್ಲಿ ಡಾ. ಎಚ್. ಎಂ. ಮರಳುಸಿದ್ದಯ್ಯ ಈ ನಿರ್ಣಯಗಳನ್ನು ಮಂಡಿಸಿದರು. ಸಭೆ ಕರತಾಡನದ ಮೂಲಕ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಿತು.
ಜಾಗತೀಕರಣ ಹಾಗೂ ಖಾಸಗೀಕರಣ ನೀತಿಯಿಂದಾಗಿ ನಷ್ಟಕ್ಕೆ ತುತ್ತಾಗಿರುವ ಗ್ರಾಮೀಣ ರೈತ ಸಮುದಾಯದ ಬಗ್ಗೆಯೂ ಸಮ್ಮೇಳನದಲ್ಲಿ ಕಳಕಳಿ ವ್ಯಕ್ತವಾಯಿತು. ಹಾಲಿ ಇರುವ ಶಾಲೆ, ಕಾಲೇಜು ಪ್ರವೇಶ, ಉದ್ಯೋಗದಲ್ಲಿ ಕೇವಲ ಜಾತಿಯನ್ನು ಪರಿಗಣಿಸದೆ, ರಾಜ್ಯಾಂಗದ ಚೌಕಟ್ಟಿನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗಳ್ನು ಪರಿಗಣಿಸಿ ಸಾಮಾಜಿಕ ಸಮಾನತೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.
ಸಮಾರಂಭದಲ್ಲಿ ಡಾ. ಭಗವಾನ್ ದಾಸ್ ತಿವಾರಿ, ಡಾ. ಎಚ್. ಚಂದ್ರಶೇಖರ್, ಎಂ. ನಾಗಪ್ಪ ಗೊ.ರು. ಚನ್ನಬಸಪ್ಪ ಮೊದಲಾದವರು ಹಾಜರಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications