Get Updates
Get notified of breaking news, exclusive insights, and must-see stories!

ಬೆಳಗಾವಿಯಲ್ಲಿ 22ರಿಂದ ‘ಜ್ಞಾನ ಸಹಸ್ರಮಾನ’

ಬೆಂಗಳೂರು : ಡಿಸೆಂಬರ್‌ 22ರಿಂದ ಮೂರು ದಿನಗಳ ಕಾಲ ‘ಜ್ಞಾನ ಸಹಸ್ರಮಾನ ’ - ವಿದ್ಯಾರ್ಥಿ ಸಮ್ಮೇಳನ ಬೆಳಗಾವಿಯಲ್ಲಿ ಜರುಗಲಿದೆ. ಭಾರತೀಯ ಕಂಪ್ಯೂಟರ್‌ ಸೊಸೈಟಿ (ಸಿ.ಎಸ್‌.ಐ) ಈ 14ನೇ ವಿದ್ಯಾರ್ಥಿ ಸಮ್ಮೇಳನವನ್ನು ಆಯೋಜಿಸಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಮಾಹಿತಿ ತಂತ್ರಜ್ಞಾನದ ಬಗೆಗಿನ ತಿಳಿವಳಿಕೆಯನ್ನು ಪ್ರದರ್ಶಿಸಲು ವಿದ್ಯಾರ್ಥಿಗಳಿಗೆ ಈ ಸಮ್ಮೇಳನ ವೇದಿಕೆಯಾಗಲಿದೆ.

ಈ ವಿಷಯವನ್ನು ಸಂಯೋಜಕ ಸಮಿತಿಯ ಅಧ್ಯಕ್ಷ ಹಾಗೂ ಗೋಗ್ಟೇ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಡಿ.ಎಚ್‌. ರಾವ್‌ ತಿಳಿಸಿದ್ದಾರೆ. ಸಮ್ಮೇಳನವು ಗೋಗ್ಟೇ ತಾಂತ್ರಿಕ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ ಎಂದೂ ಅವರು ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್‌. ರಾಜಶೇಖರಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಕಾನೂನು ಸಂಸ್ಥೆ ಕಾರ್ಯದರ್ಶಿ ವಿ.ಎಸ್‌. ಕುಲಕರ್ಣಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದೂ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+