ಸಂಪಿಗೆ ಫುಲ್ಸ್ಟಾಪ್, ಮಂಗಳವಾರದಿಂದ ಅಂಚೆ ಸೇವೆ ಮಾಮೂಲು
ನವದೆಹಲಿ : ಸುಮಾರು ಪ್ರತಿಶತ 70ರಷ್ಟು ಅಂಚೆ ನೌಕರರ ಬೆಂಬಲವಿರುವ ಅಂಚೆ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್ಎಫ್ಪಿಇ) ಸಂಪಿನ ಪಟ್ಟು ಬಿಟ್ಟುಕೊಟ್ಟಿದ್ದು, ಮಂಗಳವಾರದಿಂದ ಅಂಚೆ ಸೇವೆ ಮಾಮೂಲಿನಂತಿರುತ್ತದೆ.
ಭಾನುವಾರ ರಾತ್ರಿ ಕೇಂದ್ರ ಸಂಪರ್ಕ ಖಾತೆ ಸಚಿವ ರಾಂ ವಿಲಾಸ್ ಪಾಸ್ವಾನ್ ಅವರ ಜೊತೆ ಚರ್ಚೆ ನಡೆಸಿದ ನಂತರ, ಭಾರತೀಯ ಅಂಚೆ ನೌಕರರ ಒಕ್ಕೂಟ ಮತ್ತು ಫೆಡರೇಷನ್ ಆಫ್ ನ್ಯಾಷನಲ್ ಪೋಸ್ಟಲ್ ಆರ್ಗನೈಜೇಷನ್ಗಳು ಮುಷ್ಕರ ಕೈಬಿಟ್ಟು, ಸೋಮವಾರದಿಂದಲೇ ಕೆಲಸಕ್ಕೆ ಹಾಜರಾಗಲು ನಿರ್ಧರಿಸಿದವು. ಮುಷ್ಕರ ಕೈಬಿಟ್ಟ ಎರಡು ಅಂಚೆ ಒಕ್ಕೂಟಗಳ ನಿರ್ಧಾರವನ್ನು ಖಂಡಿಸಿದ್ದ ಅಂಚೆ ನೌಕರರ ರಾಷ್ಟ್ರೀಯ ಒಕ್ಕೂಟವೂ ಮಂಗಳವಾರದಿಂದ ಕೆಲಸಕ್ಕೆ ಹಾಜರಾಗಲು ಸೋಮವಾರ ಸಂಜೆ ನಿರ್ಧರಿಸಿತು.
ಸಂಪಿನಿಂದ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ. ಸಚಿವರ ತಂಡದ ಮುಂದೆ ನಮ್ಮ ಬೇಡಿಕೆಗಳನ್ನು ಮಂಡಿಸಲು ನಿರ್ಧರಿಸಿದ್ದೇವೆ ಎಂದು ಒಕ್ಕೂಟದ ಮಹಾ ಕಾರ್ಯದರ್ಶಿ ಆರ್.ಎಲ್.ಭಟ್ಟಾಚಾರ್ಯ ತಿಳಿಸಿದ್ದಾರೆ. ಇನ್ನು ಮುಂದೆ ಮುಷ್ಕರವನ್ನು ಮೊದಲೇ ಕೈಬಿಟ್ಟ ಎರಡು ಸಂಘಟನೆಗಳೊಂದಿಗೆ ಎನ್ಎಫ್ಪಿಇ ಯಾವುದೇ ಚಳವಳಿಯಲ್ಲಿ ಭಾಗ-ವ-ಹಿಸುವುದಿಲ್ಲ ಎಂದೂ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications