ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಅನುಮತಿ ಶೀಘ್ರ ನಿರ್ಧಾರ

By Staff
|
Google Oneindia Kannada News

ಬೆಂಗಳೂರು : ಹೊಸ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಅನುಮತಿ ನೀಡುವ ಸಂಬಂಧ ಸರಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳುಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್‌ ಮಂಗಳವಾರ ಹೇಳಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ಥಳೀಯ ಸಮಿತಿ ಮತ್ತು ತಜ್ಞರ ಸಮಿತಿಗಳನ್ನು ರಚಿಸಲಾಗಿದ್ದು, ಅವು ಅನುಮತಿ ನೀಡುವ ಸಂಬಂಧ ಸಲ್ಲಿಸಿರುವ ವರದಿಯನ್ನು ಸಂಪುಟ ಉಪಸಮಿತಿ ಪರಿಶೀಲಿಸುತ್ತಿದೆ. ಅನುಮತಿ ಬಯಸಿರುವ 72 ಅರ್ಜಿಗಳು ಸರಕಾರದ ಮುಂದಿವೆ. ಅರ್ಜಿಗಳಲ್ಲಿ 35 ಅರ್ಜಿಗಳು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಬಂದಿವೆ. ಅನುಮತಿ ನೀಡಲು ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್‌ ಹಾಗೂ ಟೆಲಿಕಮ್ಯುನಿಕೇಷನ್‌ ಕೋರ್ಸ್‌ಗಳಿರುವ ಗ್ರಾಮಾಂತರ ಪ್ರದೇಶದ ಕಾಲೇಜುಗಳಿಗೆ ಆದ್ಯತೆ ನೀಡಲಾಗುವುದು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಂತ್ರಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಪರಿಣಿತಿಯನ್ನು ಪ್ರೊತ್ಸಾಹಿಸಲು ಬರುವ ಶೈಕ್ಷಣಿಕ ವರ್ಷದಿಂದ 100 ಬಹುಮಾನಗಳನ್ನು ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X