ರಾಜ್ಯವ ಚುಂಬಿಸದ ಬಿಸಿಗಾಳಿ, ಚಳಿಯೋ ಚಳಿ
ಬೆಂಗಳೂರು : ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಬೀಸುತ್ತಿರುವ ಶೀತ ಮಾರುತಗಳ ಜತೆ ಜತೆಗೇ ಪೂರ್ವ ದಿಕ್ಕಿನ ಬಂಗಾಳಕೊಲ್ಲಿಯ ಮೇಲೆ ಬೀಸಿ ಬರುತ್ತಿದ್ದ ಬಿಸಿ ಗಾಳಿ ಇನ್ನೂ ರಾಜ್ಯವನ್ನು ಚುಂಬಿಸದ ಕಾರಣ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಗುಲ್ಬರ್ಗಾದಲ್ಲಿ ರಾಜ್ಯದಲ್ಲಿಯೇ ಅತಿ ಕನಿಷ್ಠ ತಾಪಮಾನ 7.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೆಂಗಳೂರಿನ ತಾಪಮಾನ 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಂಭವ ಇದೆ.
14 ಡಿಗ್ರಿ ಸೆಲ್ಸಿಯಸ್ ಇದ್ದರೇ ಗಢ ಗಢ ನಡುಗುವ ಬೆಂಗಳೂರಿನ ಮಂದಿ 12 ಡಿಗ್ರಿ ತಲುಪಿದರೆ ಏನು ಗತಿಯಪ್ಪ ಎಂದು ಆಗಲೇ ಯೋಚನೆ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನದಲ್ಲಿ ಹೆಚ್ಚಳ ಕಂಡುಬಂದಿದೆ. ತೀರ ಪ್ರದೇಶ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲೂ ತಾಪಮಾನದಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ.
ಮುನ್ಸೂಚನೆಯ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಳಗಾವಿ, ಬೀದರ್, ಬಿಜಾಪುರ ಹಾಗೂ ಗುಲ್ಬರ್ಗಾ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ರಾತ್ರಿಯ ವೇಳೆ ಕನಿಷ್ಠ ತಾಪಮಾನ ಕುಸಿದು, ಭಾರಿ ಚಳಿಯ ವಾತಾವರಣ ಮೂಡಲಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಲ ಆಕಾಶ ಇದ್ದು, ತಾಪಮಾನ 12ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ಸಂಭವ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications