ಇನ್‌ಫೋಸಿಸ್ ನಾರಾಯಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್
ಬೆಂಗಳೂರು : ಕಿಶೋರ ವೈಜ್ಞಾನಿಕ ಪ್ರೋತ್ಸಾಹ ಯೋಜನೆಯಡಿಯಲ್ಲಿ ತರಬೇತಿ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಯೋಗಾಲಯಗಳಲ್ಲಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಯೋಜನೆಯಾಂದನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಪ್ರೊ. ವಿ.ಎಸ್. ರಾಮಮೂರ್ತಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಮತ್ತು ಬೋಧನಾ ಹಾಗೂ ಸಂಶೋಧನಾಲಯಗಳ ಗುಣಮಟ್ಟ ರಕ್ಷಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿಧಿಯಾಂದನ್ನು ಸ್ಥಾಪಿಸಿದೆ ಎಂದೂ ಅವರು ಹೇಳಿದರು.
ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ಮಾತನಾಡುತ್ತಿದ್ದ ಅವರು, ವಿದ್ಯಾರ್ಥಿಗಳು ವೈಜ್ಞಾನಿಕ ಸಂಶೋಧನೆಯಲ್ಲಿ ಪಾಲ್ಗೊಳ್ಳುವಂತೆ ಉತ್ತೇಜನ ನೀಡಲು ಶಿಷ್ಯ ವೇತನ ಹಾಗೂ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.
ಗೌರವ ಡಾಕ್ಟರೇಟ್ : ಬೆಂಗಳೂರು ವಿಶ್ವ ವಿದ್ಯಾಲಯವು ಇದೇ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪ್ರತಿಮ ಸೇವೆಗಾಗಿ ಇನ್‌ಫೋಸಿಸ್‌ನ ಎನ್.ಆರ್. ನಾರಾಯಣಮೂರ್ತಿ ಹಾಗೂ ಅಣುಶಕ್ತಿ ಇಲಾಖೆಯ ಕಾರ್ಯದರ್ಶಿ ಆರ್. ಚಿದಂಬರಂ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿತು. ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು ಡಾಕ್ಟರೇಟ್ ಪ್ರದಾನ ಮಾಡಿದರು.
ಪ್ರತಿಕ್ರಿಯೆ : ತಮಗೆ ನೀಡಿದ ಈ ಗೌರವ, ಇನ್‌ಫೋಸಿಸ್‌ನ 8,500 ಮಂದಿ ನೌಕರರಿಗೆ ಸಂದ ಗೌರವ ಎಂದು ನಾರಾಯಣ ಮೂರ್ತಿ ಬಣ್ಣಿಸಿದರೆ, ಮುಂದಿನ ದಿನಗಳಲ್ಲಿ ದೇಶದ ಅರ್ಥವ್ಯವಸ್ಥೆಯಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನವೇ ಪ್ರಮುಖ ಪಾತ್ರ ವಹಿಸುವುದು ಎಂದು ಚಿದಂಬರಂ ಹೇಳಿದರು.
ಚಿನ್ನದ ಪದಕ : 36ನೇ ಘಟಿಕೋತ್ಸವ ಸಮಾರಂಭದಲ್ಲಿ 210 ಚಿನ್ನದ ಪದಕ, 90 ನಗದು ಬಹುಮಾನ, 75 ಮಂದಿ ಪಿಎಚ್‌ಡಿ ಪದವಿಗೆ ಪಾತ್ರರಾಗಿದ್ದಾರೆ ಎಂದು ಉಪಕುಲಪತಿ ಡಾ. ಕೆ. ಸಿದ್ಧಪ್ಪ ತಿಳಿಸಿದರು. ಒಟ್ಟು 21,733 ವಿದ್ಯಾರ್ಥಿಗಳು ಈ ಸಾಲಿನಲ್ಲಿ ಪದವಿ ಪಡೆದಿದ್ದಾರೆ.
ಪದಕ ವಿಚೇತರು : ಕೆ.ಎನ್. ಪ್ರವೀಣ್ (14 ಪದಕ), ಎಸ್. ಶ್ರುತಿ (8 ಪದಕ), ಸಿಂಧು (8 ಪದಕ), ಬಿ.ಎಸ್. ಅಶೋಕ್ ಕುಮಾರ್ (6 ಪದಕ), ರಾಜೇಶ್ವರಿ, ವಿಜಯ ತಲಾ 5 ಪದಕ ಪಡೆದರು. ಎಲ್‌ಎಲ್‌ಎಂ ಪದವಿಯಲ್ಲಿ ಬೆಂಗಳೂರು ವಿ.ವಿ. ಕಾನೂನು ಕಾಲೇಜಿನ ವಿದ್ಯಾರ್ಥಿನಿ ಜಿ.ಎಸ್. ನೀಲಾಂಬಿಕಾ ರ್ಯಾಂಕ್ ಪಡೆದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications