Get Updates
Get notified of breaking news, exclusive insights, and must-see stories!

ಬಸವನಗುಡಿ ನ್ಯಾಷನಲ್‌ ಹೈಸ್ಕೂಲ್‌ನಲ್ಲಿ 83ನೇ ವರ್ಷಾಚರಣೆ

ಬೆಂಗಳೂರು: ಸಮಾಜದಲ್ಲಿ ಕಾಣಬರುತ್ತಿರುವ ಅಪಾಯಕಾರಿ ಬೆಳವಣಿಗೆಗಳನ್ನು ವೈಜ್ಞಾನಿಕವಾಗಿ ತರ್ಕಿಸುವ ಪ್ರವೃತ್ತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕೃಷ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ನಗರದಲ್ಲಿ ಇಂದು ಬಸವನಗುಡಿ ನ್ಯಾಷನಲ್‌ ಕಾಲೇಜಿನ 83 ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಸರ್‌.ಸಿ.ವಿ. ರಾಮನ್‌ರಂತೆ, ಸರ್‌.ಎಂ. ವಿಶ್ವೇಶ್ವರಯ್ಯನವರಂತೆ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಬೇಕು. ಇದಕ್ಕಾಗಿ ಕ್ಷುಲ್ಲಕ ವಿಷಯಗಳ ಬಗ್ಗೆ ಗಮನ ಹರಿಸದೆ, ಹೊಸ ಆವಿಷ್ಕಾರಗಳ ಬಗ್ಗೆ ಅರಿಯುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದರು. ಇಂದಿನ ವೈಜ್ಞಾನಿಕ ಯುಗದಲ್ಲಿ ಪ್ರತಿಭೆಯ ಪ್ರಕಾಶಕ್ಕೆ ಮುಕ್ತ ಅವಕಾಶವಿದೆ ಎಂದೂ ಅವರು ಹೇಳಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ತನ್ನತನ ಹಾಗೂ ಘನತೆಯನ್ನು ಕಾಪಾಡಿಕೊಂಡು ಬಂದಿರುವ ಈ ಶಾಲೆಯಲ್ಲಿ ಓದಿದ ಬಹಳಷ್ಟು ಮಂದಿ ಇಂದು ವಿಶ್ವದಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ಶಾಲೆಯ ಉನ್ನತಿಗೆ ದುಡಿಯುತ್ತಿರುವ ಎಚ್‌. ನರಸಿಂಹಯ್ಯನವರು ಇಂದಿನ ಪೀಳಿಗೆಗೆ ಆದರ್ಶಪ್ರಾಯರಾಗಿದ್ದಾರೆ ಎಂದರು.

ಎಚ್‌.ಎನ್‌. ಪರಿಚಯ ಭಾಷಣ ಮಾಡಿ, ಸಂಸ್ಥೆ ಬೆಳೆದುಬಂದ ದಾರಿಯನ್ನು ವಿವರಿಸಿದರು. ಸಮಾರಂಭದಲ್ಲಿ ಶಾಲೆಯ ಪ್ರಾಚಾರ್ಯ ನರಸಿಂಹಪ್ಪ ಹಾಗೂ ಸಂಸ್ಥೆಯ ಕಾರ್ಯದರ್ಶಿ ಡಾ. ಎ.ಎಚ್‌. ರಾಮರಾವ್‌ ಹಾಜರಿದ್ದರು.

ವಾರ್ತಾ ಸಂಚಯ
ಮುಖಪುಟ / ಸ್ಯಾಂಡಲ್‌ವುಡ್‌

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+