ಗಣಿ ಕಾರ್ಮಿಕರ ಮೇಲೆ ಹಲ್ಲೆ ಕೆಜಿಎಫ್ ಉದ್ವಿಗ್ನ
ಕೋಲಾರ : ವಿರೋಧಿ ಕಾರ್ಮಿಕ ಸಂಘಟನೆಯ ಗುಂಪಿನವರು ನಿರಶನ ನಿರತ ಇಬ್ಬರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದರೆಂಬ ಹಿನ್ನೆಲೆಯಲ್ಲಿ ಬುಧವಾರ ಚಿನ್ನದ ಗಣಿಯ ಕೆ.ಜಿ.ಎಫ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಗಣಿ ಕಾರ್ಮಿಕರಾದ ರವಿ ಮತ್ತು ವೇಣು ಅವರ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ಅಧಿಕಾರಿಗಳ ಕಚೇರಿಯ ಎದುರು ಭಾರಿ ಸಂಖ್ಯೆಯಲ್ಲಿ ಸೇರಿದ ಜನರ ಗುಂಪು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ಗಾಯಗೊಂಡಿರುವ ರವಿ ಅವರನ್ನು ಕೆ.ಜಿ.ಎಫ್. ಸಾರ್ವಜನಿಕ ಆಸ್ಪತ್ರೆಗೂ, ವೇಣು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೂ ಸೇರಿಸಲಾಗಿದೆ. ಕೇಂದ್ರ ವಲಯದ ಐಜಿಪಿ ಎನ್. ಅಚ್ಚುತ ರಾವ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೆಚ್ಚುವರಿ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ.
ಕೆಜಿಎಫ್ ಬಂದ್ : ಚಿನ್ನ ನೀಡಿದ ಕೈಗಳಿಗೆ ಅನ್ನ ನೀಡಿ ಎಂದು ಒತ್ತಾಯಿಸಿ ಆರ್ಪಿಐ ಕರೆ ನೀಡಿದ್ದ ಕೆಜಿಎಫ್ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರಕಿತು. ಅಂಗಡಿ ಮುಂಗಟ್ಟುಗಳು, ಸಿನಿಮಾ ಮಂದಿರಗಳು, ಬ್ಯಾಂಕ್ ಹಾಗೂ ಶಿಕ್ಷಣ ಸಂಸ್ಥೆಗಳ ಮುಚ್ಚಿದ್ದವು. ಕಳೆದ ಐದು ದಿನಗಳಿಂದಲೂ ಗಣಿಯ ಕಾರ್ಮಿಕರು ಚಿನ್ನದ ಗಣಿ ಮುಚ್ಚದಂತೆ ಆಗ್ರಹಿಸಿ, ಸರದಿ ಉಪವಾಸ ಮುಷ್ಕರ ನಡೆಸುತ್ತಿದ್ದಾರೆ.
ಈ ಮಧ್ಯೆ ಬುಧವಾರ ಪಟ್ಟಣದಲ್ಲಿ ಬೃಹತ್ ಮೆರವಣಿಗೆಯೂ ನಡೆಯಿತು. 27ರಂದು ದೆಹಲಿಯಲ್ಲಿ ಮೆರವಣಿಗೆ ನಡೆಸಿ ಕೆಜಿಎಫ್ ಉಳಿಸಿ ಹೋರಾಟ ಮುಂದುವರಿಸಲೂ ನಿರ್ಧರಿಸಲಾಯಿತು. ಮಂಗಳವಾರ ನಡೆದ ಹಲ್ಲೆಯ ಘಟನೆಯಾಂದನ್ನು ಹೊರತುಪಡಿಸಿ, ಬಂದ್ ಶಾಂತಿಯುತವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಯು.ಎನ್.ಐ, ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications