ಅಜರ್, ಜಡೇಜಾ, ಮನೋಜ್ರಿಂದ ಅರ್ಜುನ ಪ್ರಶಸ್ತಿ ಕಸಿಯಲು ಕೇಂದ್ರ ನಿರ್ಧಾರ
ನವದೆಹಲಿ : ಮ್ಯಾಚ್ಫಿಕ್ಸಿಂಗ್ನಲ್ಲಿ ಕಳಂಕಿತರಾಗಿರುವ ಮಾಜಿ ಕ್ರಿಕೆಟ್ ತಾರೆಗಳಾದ ಮೊಹಮದ್ ಅಜರುದ್ದೀನ್, ಅಜಯ್ ಜಡೇಜಾ ಹಾಗೂ ಮನೋಜ್ ಪ್ರಭಾಕರ್ ಅವರಿಂದ ಅರ್ಜುನ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ವಾಪಸ್ಸು ಪಡೆಯುವುದೆಂದು ಕೇಂದ್ರ ಕ್ರೀಡಾ ಸಚಿವೆ ಉಮಾಭಾರತಿ ತಿಳಿಸಿದ್ದಾರೆ.
ಮೋಸದಾಟದಲ್ಲಿ ಪಾಲ್ಗೊಂಡ ಆಟಗಾರರಿಗೆ ಬಿಸಿಸಿಐ ಹೇರಿರುವ ನಿಷೇಧದ ಕುರಿತ ಪ್ರಶ್ನೆಯಾಂದಕ್ಕೆ ಉಮಾಭಾರತಿ ಸಂಸತ್ತಿನಲ್ಲಿ ಶುಕ್ರವಾರ ಉತ್ತರಿಸುತ್ತಿದ್ದರು. ನಾವು ಕಳಂಕಿತ ಆಟಗಾರರಿಗೆ ಸರ್ಕಾರ ನೀಡಿರುವ ಅತ್ಯುಚ್ಛ ಕ್ರೀಡಾ ಪ್ರಶಸ್ತಿಗಳನ್ನು ವಾಪಸ್ಸು ಪಡೆಯಲು ನಿಶ್ಚಯಿಸಿದ್ದೇವೆ ಎಂದರು.
ಕ್ರೀಡಾ ಸಚಿವಾಲಯದ ಅನುಮೋದನೆಯಂತೆ ಪ್ರಶಸ್ತಿ ವಾಪಸ್ಸು ಪಡೆಯುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಆದರೆ, ಪ್ರಶಸ್ತಿಗಳನ್ನು ವಾಪಸ್ಸು ಪಡೆಯುವ ಮುನ್ನ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಲು ಕಳಂಕಿತ ಆಟಗಾರರಿಗೆ 15 ದಿನ ಕಾಲಾವಕಾಶ ನೀಡುತ್ತೇವೆ ಎಂದು ಉಮಾಭಾರತಿ ಹೇಳಿದರು. ಅಜರುದ್ದೀನ್ 1986 ರಲ್ಲಿ , ಪ್ರಭಾಕರ್ 1993 ರಲ್ಲಿ ಹಾಗೂ ಜಡೇಜಾ 1997 ರಲ್ಲಿ ಅರ್ಜುನ ಪ್ರಶಸ್ತಿ ಪಡೆದಿದ್ದರು.
(ಇನ್ಫೊ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications