ಮೋಕ್ಷ ಕಂಡ ನಾಡಿಗರ ಪಂಚಭೂತಗಳು
ಬೆಂಗಳೂರು : ಪ್ರತಿಯಾಂದನ್ನೂ ನೋಟಿನ ಹಿನ್ನೆಲೆಯಲ್ಲಿ ನೋಡುವ ಪ್ರಸ್ತುತದ ಜಮಾನದ ಬಗ್ಗೆ ಹಿರಿಯ ಕವಿ ಜಿ.ಎಸ್. ಶಿವರುದ್ರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.
ಸುಮತೀಂದ್ರ ನಾಡಿಗರ ಪಂಚಭೂತಗಳು ಕೃತಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸೋಮವಾರ ನಡೆದ ಕಾರ್ಯಕ್ರಮವನ್ನು ಭಾರತ ಯಾತ್ರಾ ಕೇಂದ್ರ ಮತ್ತು ಸಪ್ನ ಬುಕ್‌ಹೌಸ್ ಸಂಯುಕ್ತವಾಗಿ ಏರ್ಪಡಿಸಿದ್ದವು.
ನಾವು ಬಾಳುತ್ತಿರುವುದು ವೇದಯುಗವಲ್ಲ , ವೇಗಯುಗ ಎಂದು ಬಣ್ಣಿಸಿದ ಶಿವರುದ್ರಪ್ಪ , ಧಾವಂತದ ಯುಗದಲ್ಲಿ ಪುರುಸೊತ್ತನ್ನು ಕಳಕೊಂಡಿರುವ ಜನ ಕಷ್ಟ ಇಲ್ಲದೆ ಹಣ್ಣು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಮಹತ್ವಾಕಾಂಕ್ಷೆ , ಕನಸು ಕಳೆದುಕೊಂಡ ಕಾಲವಿದು. ಆದರೂ ಅಲ್ಲಲ್ಲಿ ಮಹತ್ವವನ್ನು ಹಿಡಿದು ತಮ್ಮ ಇಷ್ಟಕ್ಕೆ ಒಗ್ಗಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಅಂಥಾ ಒಂದು ಪ್ರಯತ್ನವೇ ನಾಡಿಗರ ಪಂಚಭೂತಗಳು ಎಂದರು.
ಸೃಷ್ಟಿ , ಪುರಾಣದ ಇನ್ನಷ್ಟು ದೇಶೀ ಕಲ್ಪನೆಗಳನ್ನು ಒಗ್ಗಿಸಿಕೊಂಡು ಕಾವ್ಯ ಬರೆದಿದ್ದರೆ ಅದು ಇನ್ನಷ್ಟು ಸತ್ವಯುತವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟ ಶಿವರುದ್ರಪ್ಪ ಕೇವಲ ವೇದ ಉಪನಿಷತ್ತುಗಳು ಮಾತ್ರ ನಮ್ಮನ್ನು ಭಾರತೀಯರನ್ನಾಗಿಸಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಪುಸ್ತಕ ಬಿಡುಗಡೆ ಮಾಡಿದರು. ಪುಸ್ತಕದ ಬಗ್ಗೆ ಮಾತನಾಡಿದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಯು.ಆರ್. ಅನಂತಮೂರ್ತಿ, ನಾಡಿಗರದು ಸೊಗಸಾದ ಭಾಷೆ, ಎಲ್ಲೂ ಎಡವದ ಅಚ್ಚುಕಟ್ಟುತನ, ಛಂದೋಬದ್ಧವಾದ ಲಯ ಅದರಲ್ಲಿ ಕಂಡುಬರುತ್ತದೆ ಎಂದರು. ಪರಂಪರೆಯನ್ನು ಮರೆತ ಎರಡು ಜನಾಂಗಗಳನ್ನು ಬೆಸೆಯುವ ಪ್ರಯತ್ನ ನಾಡಿಗರ ಕೃತಿ ಎಂದು ಬನ್ನಂಜೆ ಗೋವಿಂದಾಚಾರ್ಯ ಹೇಳಿದರು.
ಇದೇ ಸಂದರ್ಭದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಡಾ. ರಾಮಚಂದ್ರಶರ್ಮ, ಡಾ. ಚಂದ್ರಶೇಖರ ಕಂಬಾರ,. ಡಾ.ಎಚ್.ಎಸ್. ವೆಂಕಟೇಶಮೂರ್ತಿ, ಪ್ರೊ.ಜಿ.ಎಸ್.ಸಿದ್ಧಲಿಂಗಯ್ಯ ಮುಂತಾದವರು ಭಾಗವಹಿಸಿದ್ದರು.
(ಇನ್ಪೊ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications