ಸಚಿವರ ಕಾರು ಅಪಘಾತ : 7 ಮಂದಿಗೆ ಗಾಯ
ಮೈಸೂರು : ಜಿಲ್ಲೆಯ ಬಿಳಿಕೆರೆ ಬಳಿ ನಿಂತಿದ್ದ ಟೆಂಪೋ ಒಂದಕ್ಕೆ ರಾಜ್ಯ ವಿತ್ತ ಸಚಿವ ಎಂ. ಶಿವಣ್ಣನವರ ಕಾರು ಡಿಕ್ಕಿ ಹೊಡೆದ ಪರಿಣಮವಾಗಿ ಸಚಿವರೂ ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ.
ಪಿರಿಯಾಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರು ಶ್ರೀ ಶಿವರಾತ್ರೀಶ್ವರ ಭಗವತ್ಪಾದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಚಿವ ಶಿವಣ್ಣನವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಖರವಾದ ಸೂರ್ಯನ ಕಿರಣಗಳು ಚಾಲಕನ ಕಣ್ಣಿಗೆ ಬಿದ್ದಿದ್ದರಿಂದ ಎದುರು ನಿಂತಿದ್ದ ಟೆಂಪೊ ಕಾಣಿಸಲಿಲ್ಲ ಎಂದು ಸಚಿವರ ಆಪ್ತ ವಲಯಗಳಿಂದ ತಿಳಿದುಬಂದಿದೆ.
ಚಾಲಕ ನಂದ ಹಾಗೂ ಆಪ್ತ ಸಹಾಯಕ ಅನಂತಾಚಾರ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಟೆಂಪೋದಲ್ಲಿ ಕುಳಿದ್ದ ನಾಲ್ವರೂ ಗಾಯಗೊಂಡಿದ್ದಾರೆ. ಅಂಗರಕ್ಷಕ ಚೆಂಬಯ್ಯ ಅವರಿಗೆ ಮಾತ್ರ ಯಾವುದೇ ಗಾಯಗಳಾಗಿಲ್ಲ. ಸಚಿವ ಶಿವಣ್ಣ ಅವರು, ಇಲ್ಲಿನ ಬಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಚಿವರ ಮೂಗಿನ ಮೂಳೆ ಮುರಿದಿದೆ ಎನ್ನಲಾಗಿದೆ.
ಮೈಸೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು, ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಯೋಗಕ್ಷೇಮ ವಿಚಾರಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications