ವೀರಪ್ಪನ್ ಪತ್ತೆಗೆ ಅರಣ್ಯ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ
ಕೊಯಮತ್ತೂರು : ವೀರಪ್ಪನ್ ಬೇಟೆ ಕಾರ್ಯಾಚರಣೆ ಭರದಿಂದ ಸಾಗಿದೆ. ಕೊಯಮತ್ತೂರು ಹಾಗೂ ನೀಲಗಿರಿ ಪ್ರದೇಶದ ಸುಮಾರು 200 ಕಿ.ಮೀಟರ್ ವ್ಯಾಪ್ತಿಯಲ್ಲಿ ವೀರಪ್ಪನ್ಗಾಗಿ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ. ಈ ವಿಷಯವನ್ನು ಪೊಲೀಸ್ ಮೂಲಗಳು ದೃಢಪಡಿಸಿವೆ.
ಅತ್ಯಾಧುನಿಕ ಹಾಗೂ ಪ್ರಬಲ ಎಲೆಕ್ಟ್ರಾನಿಕ್ ಬೈನಾಕ್ಯುಲರ್ಗಳನ್ನು ಅಳವಡಿಸಲಾಗಿರುವ ಎರಡು ಪ್ರತ್ಯೇಕ ಹೆಲಿಕಾಪ್ಟರ್ಗಳಲ್ಲಿ ಈ ಸಮೀಕ್ಷಾ ಕಾರ್ಯ ಮುಂದುವರಿದಿದೆ. ಜರ್ಮನಿಯಿಂದ ತರಿಸಿಕೊಳ್ಳಲಾಗಿರುವ ಅತಿ ಹೆಚ್ಚು ಸಾಮರ್ಥ್ಯದ ದೂರದರ್ಶಕಗಳನ್ನೂ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಚಿನ್ನಪತ್ತಿ ಹಾಗೂ ಬಾರ್ಲಿಯಾರ್ ಅರಣ್ಯ ಪ್ರದೇಶದಲ್ಲಿ ಈ ವೈಮಾನಿಕ ಸಮೀಕ್ಷೆ ನಡೆಯುತ್ತಿದೆ.
ಬಿಎಸ್ಎಫ್ ಹಾಗೂ ಎಸ್ಟಿಎಫ್ನ ತುಕಡಿಗಳನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ನಾಲ್ಕು ಭಾಗಗಳಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದೂ ತಿಳಿದುಬಂದಿದೆ. ಈ ಮಧ್ಯೆ ಕೊಯಮತ್ತೂರು ತಾಲೂಕಿನ ಆನೆಗಡ್ಡಿ ಅರಣ್ಯ ಪ್ರದೇಶದಲ್ಲಿ ಗುಂಪೊಂದು ಕಳೆದ ವಾರ ಸೆಸೋಲೆಯೂರು ಹಾಡಿಯ ವ್ಯಕ್ತಿಯಾಬ್ಬರ ಮೇಲೆ ಗುಂಡಿನ ಮಳೆಗರೆದಿರುವ ಹಿನ್ನೆಲೆಯಲ್ಲಿ ಇದು ವೀರಪ್ಪನ್ ಸಹಚರರ ಕೃತ್ಯ ಎಂದು ಶಂಕಿಸಲಾಗಿದ್ದು, ವೀರಪ್ಪನ್ ಇದೇ ಅರಣ್ಯ ಪ್ರದೇಶದಲ್ಲಿ ಇದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಮಧ್ಯೆ ವೀರಪ್ಪನ್ ಸಹಚರರಿಂದ ಅಪಾಯ ಒದಗಬಹುದು ಎಂಬ ಶಂಕೆಯಿಂದ ಊಟಿ- ಮೈಸೂರು ನಡುವಿನ ವಾಹನ ಸಂಚಾರವನ್ನು ರಾತ್ರಿ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ. ಕಾಲಹಟ್ಟಿ ಘಾಟಿ ಹಾಗೂ ಮುಡುಮಲೈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications