ಆಯುರ್ವೇದ ಕಾಲೇಜ್ನಲ್ಲಿ ಲೈಂಗಿಕ ಕಿರುಕುಳ : ತನಿಖೆಗೆ ಆಗ್ರಹ
ಹುಬ್ಬಳ್ಳಿ : ಧಾರವಾಡದ ಮಹಾಗಣಪತಿ ಆಯುರ್ವೇದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಸಿಓಡಿ ತನಿಖೆ ನಡೆಸಬೇಕು ಎಂದು ಮೇಲ್ಮನೆ ಸದಸ್ಯ ಬಸವರಾಜ ಹೊರಟ್ಟಿ ಸೋಮವಾರ ಇಲ್ಲಿ ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯರ ಮೇಲೆ ಕಾಲೇಜಿನಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ಕಿರುಕುಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಈ ಸಂಬಂಧ ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ತಪ್ಪಿತಸ್ಥರು ಎಷ್ಟೇ ದೊಡ್ಡವರಾಗಿದ್ದರೂ ಅವರನ್ನು ಹಿಡಿದು ಶಿಕ್ಷೆಗೆ ಗುರಿಪಡಿಸಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಅತ್ಯಾಚಾರ : ಮುಳಗುಂದದ ಕಾಲೇಜು ವಿದ್ಯಾರ್ಥಿನಿಯಾಬ್ಬಳು ಕೋಳಿವಾಡ ಗ್ರಾಮದಲ್ಲಿ ನಡೆದ ಎನ್.ಎಸ್.ಎಸ್. ಶಿಬಿರದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ , ಆಕೆಯ ಮೇಲೆ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.
ಕೋಳಿವಾಡ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಜಿಲ್ಲಾಧಿಕಾರಿ ವಂದನಾ ಗುರ್ನಾನಿ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾಗಿಯೂ ತಿಳಿಸಿದ ಅವರು, ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಲು ತಾವು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications