ಬಜ್ಪೆ ಬಳಿಯ ಕೈಕಂಬದಲ್ಲಿ ಕೋಮು ಘರ್ಷಣೆ : ಉದ್ರಿಕ್ತ ಪರಿಸ್ಥಿತಿ
ಮಂಗಳೂರು : ಎರಡು ಕೋಮುಗಳ ನಡುವೆ ಮಂಗಳವಾರ ಘರ್ಷಣೆ ನಡೆದು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಕಂಬದಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾಗಿದೆ. ಮೇಯಲು ಬಿಟ್ಟದ್ದ ದನಕರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದುದೇ ಎರಡು ಕೋಮುಗಳ ನಡುವಿನ ಘರ್ಷಣೆಗೆ ಕಾರಣ ಎನ್ನಲಾಗಿದೆ.
ಕೋಮು ಗಲಭೆಯಿಂದಾಗಿ ಮಂಗಳೂರು - ಮೂಡುಬಿದ್ರೆ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಬೇರೆ ಮಾರ್ಗದಿಂದ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ನಗರದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆಯಾದರೂ, ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ವಲಯದ ಐಜಿ ಧರ್ಮಪಾಲ್ ನೇಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಂತ್ ಕುಮಾರ್ ಅವರು ಸ್ಥಳಕ್ಕೆ ಧಾವಿಸಿದ್ದು, ಎರಡು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ಪ್ರಕೋಪಕ್ಕೆ ಹೋಗದಂತೆ ಮುನ್ನೆಚ್ಚರಿಕೆ ಕೈಗೊಂಡಿರುವ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮೇಯಲು ಬಿಟ್ಟ ದನಕರುಗಳನ್ನು ಕದ್ದು ಮಾರುತ್ತಿದ್ದ ಎರಡು ಗುಂಪುಗಳನ್ನು ಮತ್ತೊಂದು ಕೋಮಿನವರು ಪತ್ತೆ ಹಚ್ಚಿದ್ದೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ದನಗಳನ್ನು ಕದ್ದು ಸಾಗಿಸುತ್ತಿದ್ದ ತಂಡ ಇನ್ನೊಂದು ತಂಡದ ಮೇಲೆ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಬಿಗಡಾಯಿಸಲು ಕಾರಣ ಎನ್ನಲಾಗಿದೆ. ಪೊಲೀಸರು ವಿವರ ನೀಡಲು ನಿರಾಕರಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications