ರಾಜ್ಯದ ಅಭಿವೃದ್ಧಿಗಾಗಿ ಕೃಷಿ ಕ್ಷೇತ್ರಕ್ಕೆ ಹೈಟೆಕ್ ಲೇಪ : ಎಸ್.ಎಂ. ಕೃಷ್ಣ
ಪಿರಿಯಾಪಟ್ಟಣ : ಕೃಷಿಯನ್ನು ಹೈಟೆಕ್ ಮಟ್ಟಕ್ಕೆ ಏರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಮಹಾಸ್ವಾಮಿಗಳ ಜಯಂತಿಯ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರಗತಿಪರ ರೈತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ ಒಳಗೆ ಕೃಷ್ಣ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಘೋಷಿಸಿದ ಅವರು, ರಾಜ್ಯದಲ್ಲಿ ಅಪೂರ್ಣಗೊಂಡಿರುವ ಎಲ್ಲಾ ಏತ ನೀರಾವರಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದರು.
ಯಾವುದೇ ರಾಷ್ಟ್ರದ ಪ್ರಗತಿ ಕೃಷಿ ಕ್ಷೇತ್ರವನ್ನು ಹೊರತು ಪಡಿಸಿ ಸಾಧ್ಯವಿಲ್ಲ . ಆದ್ದರಿಂದ ಕೃಷಿ ಕ್ಷೇತ್ರಕ್ಕೆ ವೈಜ್ಞಾನಿಕ ಹೊದಿಕೆ ಹೊದಿಸಿ ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಕೃಷಿ ಪದವೀಧರರನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದ ಕೃಷ್ಣ , ಕೃಷಿ ಕ್ಷೇತ್ರದ ವಿಮೆಗೆ ರಾಜ್ಯ ಸರ್ಕಾರ 100 ಕೋಟಿ ರುಪಾಯಿ ಒದಗಿಸಿದೆ ಎಂದರು.
ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ತಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡುವುದು ಎಂದು ಮುಖ್ಯಮಂತ್ರಿ ಹೇಳಿದರು.
ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಬೇಲಿಮಠದ ಶ್ರೀ ಚನ್ನಬಸವ ಸ್ವಾಮೀಜಿಗಳು ಉಪಸ್ಥಿತರಿದ್ದ ಸಮಾವೇಶದ ಅಧ್ಯಕ್ಷತೆಯನ್ನು ಕೃಷಿ ಸಚಿವ ಟಿ.ಬಿ. ಜಯಚಂದ್ರ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಹಾಗೂ ಅನೇಕ ಶಾಸಕರು ಸಮಾವೇಶದಲ್ಲಿ ಭಾಗವಹಿಸಿದ್ದರು.
(ಇನ್ಪೊ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications