ದಾವಣಗೆರೆಯಲ್ಲಿ ಪಿಂಚಣಿದಾರರ ರಾಜ್ಯ ಮಟ್ಟದ ಸಮಾವೇಶ
ಬೆಂಗಳೂರು : ರಾಜ್ಯ ಸರಕಾರಿ ಪಿಂಚಣಿದಾರರ ಸಂಘವು ದಾವಣಗೆರೆಯಲ್ಲಿ ಪಿಂಚಣಿದಾರರ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ಸಂಪತ್ ಹೇಳಿದ್ದಾರೆ.
ಡಿಸೆಂಬರ್ 29ರಂದು ಸಮಾವೇಶ ನಡೆಯಲಿದ್ದು, ಸಮಾವೇಶವನ್ನು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಉದ್ಘಾಟಿಸಲಿದ್ದಾರೆ ಎಂದು ಸಂಪತ್, ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಸಮಾವೇಶದಲ್ಲಿ ರಾಜ್ಯ ಸರಕಾರದಿಂದ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗವುದು ಎಂದು ಅವರು ಹೇಳಿದರು.
ನಿವೃತ್ತ ಸರಕಾರಿ ನೌಕರರ, ನೌಕರಿ ಅನುಭವವನ್ನು ಬಳಸಿಕೊಳ್ಳುವಂತೆ ಮತ್ತು ಹಿರಿಯ ನಾಗರಿಕರಿಗಾಗಿ ಇರುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಗುವುದು ಎಂದು ಹೇಳಿದ ಸಂಪತ್ ಇದೇ ಸಂದರ್ಭದಲ್ಲಿ , ಯುವಜನಾಂಗವು ನೌಕರಿಗಾಗಿ ಪಟ್ಟಣ ಪ್ರದೇಶಕ್ಕೆ ವಲಸೆ ಬರುವಾಗ ವೃದ್ಧ ತಂದೆ ತಾಯಂದಿರನ್ನು ಹಳ್ಳಿಯಲ್ಲಿಯೇ ಬಿಟ್ಟು ಬರುತ್ತಾರೆ. ಅಂತಹವರಿಗೆ ನೆರವಾಗಲು ಸರಕಾರ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸರಕಾರದ ಬಳಿ ಮನವಿ ಮಾಡಿಕೊಳ್ಳಲಾಗವುದು ಎಂದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications