ಗಾಂಧಿ ಕನಸ ನನಸಾಗಿಸೋಯತ್ನದ ಅನ್ನಾನ್ಗೆ ಮಿಲೆನಿಯಂ ಪ್ರಶಸ್ತಿ
ನವದೆಹಲಿ : ಅಹಿಂಸೆ ಮೂಲಕ ವಿಶ್ವ ಶಾಂತಿಗೆ ಯತ್ನಿಸುತ್ತಿರುವ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಅವರಿಗೆ ಸಹಸ್ರಮಾನದ ಶಾಂತಿ ಪ್ರಶಸ್ತಿ ನೀಡಲು ಭಗವಾನ್ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ ಸಮಿತಿ ನಿರ್ಧರಿಸಿದೆ.
ಪ್ರಶಸ್ತಿಯು ಒಂದು ಮಿಲಿಯನ್ ರೂಪಾಯಿ ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. 2001ನೇ ಸಾಲಿನ ಏಪ್ರಿಲ್ 5ರಂದು ಭಗವಾನ್ ಮಹಾವೀರರ 2,600ನೇ ಜಯಂತಿಯ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕೋಫಿ ಅನ್ನಾನ್ ಅವರಿಗೆ ಬರೆದ ಪತ್ರದಲ್ಲಿ ಸಮಿತಿಯ ಅಧ್ಯಕ್ಷ ರಿಖಬ್ ಸಿ. ಜೈನ್ ಹೇಳಿದ್ದಾರೆ.
ಕೋಫಿ ಅನ್ನಾನ್ ಅವರಿಗೆ ಈ ಪ್ರಶಸ್ತಿ ನೀಡುತ್ತಿರುವುದರಿಂದ ಮಹಾವೀರರ ವಿಶ್ವ ಶಾಂತಿ ಸಂದೇಶ ವಿಶ್ವಾದ್ಯಂತ ಪಸರಿಸಿದಂತಾಗುತ್ತದೆ ಎಂದು ಅಧ್ಯಕ್ಷರು ಹೇಳಿದರು. ಮಹಾವೀರರ ಅನೇಕತಾ ವಾದದಿಂದ ಎಲ್ಲ ಮತ ಧರ್ಮಗಳ ಸಂದೇಶವೂ ಒಂದೇ ಎಂಬ ತತ್ವವನ್ನು ಜೈನ ಪಂಥವು ಸಾರುತ್ತದೆ. ಗಾಂಧಿ ಕೂಡ ಇದೇ ತತ್ವದ ಅನುಯಾಯಿಯಾಗಿದ್ದರು ಎಂದು ಜೈನ್ ಪತ್ರದಲ್ಲಿ ಹೇಳಿದ್ದಾರೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications