ಅಕ್ಕಿಆಲೂರು : ಕೋಮು ಘರ್ಷಣೆಗೆ ಯುವಕನ ಬಲಿ, 7ಮಂದಿಗೆ ಗಾಯ
ಹಾನಗಲ್ : ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದಲ್ಲಿ ಬುಧವಾರ ಎರಡು ಕೋಮುಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಯುವಕ ಮೃತ ಪಟ್ಟಿದ್ದು, ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಸೇರಿದಂತೆ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ.
ಎರಡು ಕೋಮುಗಳಿಗೆ ಸೇರಿದ ಸ್ಮಶಾನಗಳು ಅಕ್ಕ ಪಕ್ಕದಲ್ಲಿದ್ದು , ಬುಧವಾರದಂದು 65 ವರ್ಷದ ವೃದ್ಧೆಯಾಬ್ಬರು ಅಸುನೀಗಿದಾಗ ತಮ್ಮ ಸ್ಮಶಾನದ ಮೂಲಕ ಶವ ಒಯ್ಯಬಾರದು ಎಂದು ಇನ್ನೊಂದು ಕೋಮಿನವರು ತಗಾದೆ ತೆಗೆದು ಶವ ಯಾತ್ರೆಯ ಮೇಲೆ ಕಲ್ಲು ತೂರಿದಾಗ ಗಲಾಟೆ ಆರಂಭವಾಯಿತು.
ಕಲ್ಲು ತೂರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ ಬೆಲ್ಲದ(35) ಅವರನ್ನು ಹಾವೇರಿ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಮೃತ ಪಟ್ಟರು. ಶವ ಯಾತ್ರೆಯ ಸಂದರ್ಭದಲ್ಲಿ ಗಲಭೆಯಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಗ್ರಾಮಕ್ಕೆ ಬಂದಿದ್ದ ಸಬ್ ಇನ್ಸ್ಪೆಕ್ಟರ್ ಅರವಿಂದ ಕಲಗಜ್ಜೆ ಮತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಕಲ್ಲು ತೂರಾಟದಲ್ಲಿ ಗಾಯವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದೆ.
(ಇನ್ಫೋ ವಾರ್ತೆ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications