ಚಂಡಮಾರುತ: ರಾಜ್ಯದಲ್ಲಿ ಮಳೆ ಸಂಭವ
ಬೆಂಗಳೂರು : ದಕ್ಷಿಣ ತಮಿಳುನಾಡಿನಲ್ಲಿ ಬೀಸುತ್ತಿರುವ ಚಂಡಮಾರುತ ತೀವ್ರಗತಿಯಲ್ಲಿ ಸಾಗಿದ್ದು, ಟುಟಿಕಾರನ್ ಹಾಗೂ ಪಂಬಂದ ನಡುವಿನ ಸಮುದ್ರದಲ್ಲಿ ಸಹಜಸ್ಥಿತಿಗಿಂತಲೂ ಹೆಚ್ಚು ಉಬ್ಬರಗಳನ್ನು ಸೃಷ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲವೆಡೆಯೂ ಮಳೆ ಬೀಳುವ ಸಂಭವ ಇದೆ.
ಬೆಂಗಳೂರಿನಲ್ಲಂತೂ ಗುರುವಾರ ಬೆಳಗ್ಗಿನಿಂದಲೇ ಮೋಡ ಮುಸುಕಿದೆ. ಗಂಟೆಗೆ ಸುಮಾರು 140ರಿಂದ 160 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವ ಬೆಂಗಳೂರಿನ ಮೇಲೂ ಬೀರಿದೆ. ಆದರೆ, ಈವರೆಗೆ ಬೆಂಗಳೂರಲ್ಲಿ ಮಳೆಯ ಸುಳಿವಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.
ಕರಾವಳಿ ತೀರದಲ್ಲಿ ಕನಿಷ್ಠ ತಾಪಮಾನ ಕೊಂಚ ಬದಲಾಗಿದ್ದು, ಸಾಮಾನ್ಯ ಮಟ್ಟಕ್ಕಿಂತಲೂ ಕಡಿಮೆ ಇತ್ತು. ಉತ್ತರ ಹಾಗೂ ದಕ್ಷಿಣ ಒಳನಾಡುಗಳಲ್ಲಿ ತಾಪಮಾನ ಕಡಿಮೆ ಆಗಿತ್ತು. ರಾಜ್ಯದಲ್ಲಿ ಅತಿ ಕಡಿಮೆ ತಾಪಮಾನ ಗುಲ್ಬರ್ಗಾದಲ್ಲಿ 9.4 ಡಿಗ್ರಿ ಸೆಲ್ಸಿಯಸ್ ಇತ್ತು.
ಹವಾಮಾನ ವೀಕ್ಷಣಾಲಯದ ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತ ಮುತ್ತ ಮೋಡ ಮುಸುಕಿದ ವಾತಾವರಣ ಇದ್ದು, ಕನಿಷ್ಠ ತಾಪಮಾನ 16 ಡಿಗ್ರಿಯ ಆಸುಪಾಸಿನಲ್ಲಿರುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications