ಚಂಡಮಾರುತ, ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಸೋನೆ ಮಳೆ
ಬೆಂಗಳೂರು : ತಮಿಳುನಾಡಿನ ತೂತುಕುಡಿ ಸಮೀಪದಲ್ಲಿ ಅಪ್ಪಳಿಸಿರುವ ಚಂಡಮಾರುತದ ಪರಿಣಾಮವಾಗಿ ಬೆಂಗಳೂರೂ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ರಾತ್ರಿಯಿಂದಲೇ ಸೋನೆ ಮಳೆ ಆರಂಭವಾಗಿದೆ.
ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಸಣ್ಣಗೆ ಮಳೆ ಸುರಿಯುತ್ತಿದೆ. ಮೋಡ ಕವಿದಿದೆ. ತಮಿಳುನಾಡಿನ ಕರಾವಳಿ ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿ ಮಳೆ ಆಗಿದೆ. ಮುನ್ಸೂಚನೆಯ ರೀತ್ಯ ಕರ್ನಾಟಕದ ದಕ್ಷಿಣ ಒಳನಾಡಿನ ಅಲ್ಲಲ್ಲಿ, ಕೇರಳ ಹಾಗೂ ತಮಿಳುನಾಡಿನ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ.
ಗುರುವಾರ ಬೆಳಗ್ಗೆ ತಮಿಳುನಾಡಿನ ತೂತುಕುಡಿ, ರಾಮನಾಥಪುರಂ, ತಂಜಾವೂರು, ನಾಗಪಟ್ಟಣಂ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಬಿದ್ದ ಬಗ್ಗೆ ವರದಿಯಾಗಿದೆ. ಸುಮಾರು 100 ಕಿ.ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿರುವ ಕಾರಣ ಅದರ ಪರಿಣಾಮ ಕರ್ನಾಟಕದ ಮೇಲೂ ಬೀರಿದೆ.
ಚಂಡಮಾರುತ ಈಗ ದುರ್ಬಲವಾಗಿದ್ದರೂ ಕೂಡ ಪಾಲಯಂಕೊಟ್ಟೈ ಬಳಿ ವಾಯುಭಾರ ಕುಸಿತವಾಗಿ ಅಲ್ಲಿಯೇ ಕೇಂದ್ರೀಕೃತಗೊಂಡಿದೆ. ಇದು ನಿಧಾನವಾಗಿ ಪಶ್ಚಿಮ ದಿಕ್ಕಿನೆಡೆ ಸಾಗಿ ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಳ್ಳುವ ಸಂಭವವೂ ಇದೆ ಎಂದು ವರದಿಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications