ಕವಿಶೈಲದ ಸ್ಮಾರಕ, ಕುವೆಂಪು ಅವರ ಮನೆ ಫೆ.2ರಂದು ನಾಡಿಗರ್ಪಣೆ
ಶಿವಮೊಗ್ಗ: ಕೇವಲ ಕಲಿತದ್ದನ್ನೇ ಹಾಡುವ ಬದಲು ನಾಡಿನ ಸಂಗೀತಗಾರರು ಹೊಸತನ್ನು ಶೋಧಿಸಲು ಪ್ರಯತ್ನಿಸಿದರೆ, ಸಂಗೀತ ಕ್ಷೇತ್ರ ಮತ್ತಷ್ಟು ಶ್ರೀಮಂತವಾಗುತ್ತದೆ ಎಂದು ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವೀ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಹುಟ್ಟೂರಾದ ತೀರ್ಥಹಳ್ಳಿಯ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಜನ್ಮದಿನ ಅಂಗವಾಗಿ ಏರ್ಪಡಿಸಲಾಗಿದ್ದ ಭಾವಗೀತೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು, ಸಂಗೀತಗಾರರು ಹೊಸ ಆಯಾಮದತ್ತ ಗಮನ ಹರಿಸಬೇಕು. ಭಾವಗೀತೆಯಲ್ಲಿ ಒಂದು ವಿರಾಮ ಕೂಡ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು ಎಂದರು.
ಕವಿಶೈಲ ಸ್ಮಾರಕ : ಜೀರ್ಣೋದ್ಧಾರಗೊಂಡಿರುವ ಕುವೆಂಪು ಅವರ ಮನೆಯನ್ನು ಫೆ.2ರಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿಗೆ ಅರ್ಪಿಸಲಿದ್ದಾರೆ. ಕವಿಶೈಲದಲ್ಲಿರುವ ಸ್ಮಾರಕವನ್ನು ಕವಿ ಜಿ.ಎಸ್. ಶಿವರುದ್ರಪ್ಪ ಅವರು ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ ಎಂದು ನಿವೃತ್ತ ನ್ಯಾಯಾಧೀಶ ಎನ್.ಡಿ. ವೆಂಕಟೇಶ್ ಅವರು ತಿಳಿಸಿದರು. ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ ಕವಿಶೈಲದ ಕಾಮಗಾರಿ ಸ್ವಲ್ಪ ಬಾಕಿ ಉಳಿದಿದ್ದು, ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications