ಜ.8ರಿಂದ ಕಾಲೇಜಿನಿಂದ ಕಾಲೇಜಿಗೆ ಸ್ವಾಮಿ ವಿವೇಕಾನಂದ ಸಪ್ತಾಹ
ಬೆಂಗಳೂರು : ನಗರದ ಸ್ವಾಮಿ ವಿವೇಕಾನಂದ ಪ್ರಸಾರ ಕೇಂದ್ರ ಜನವರಿ 8ರಿಂದ 13ನೇ ತಾರೀಖಿನವರೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ ವಿವೇಕಾನಂದರ ಜಯಂತ್ಯುತ್ಸವವನ್ನು ಹಮ್ಮಿಕೊಂಡಿದೆ. ತನ್ನ ಜನಪ್ರಿಯ ಕಾರ್ಯಕ್ರಮ ಸರಣಿ ‘ಕಾಲೇಜಿನಿಂದ ಕಾಲೇಜಿಗೆ ವಿವೇಕಾನಂದ’ ಅಡಿಯಲ್ಲಿ ಕೇಂದ್ರ ಈ ಬಾರಿ ವಿವೇಕಾನಂದ ಸಪ್ತಾಹ ಆಚರಿಸುತ್ತಿದೆ.
ಜನವರಿ 8ರಂದು ತುಮಕೂರಿನ ಸಿದ್ದಗಂಗಾ ಮಹಾವಿದ್ಯಾಲಯದಲ್ಲಿ ಉದ್ಘಾಟನೆ ಕಾರ್ಯಕ್ರಮ ಜರುಗಲಿದ್ದು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 9ರಂದು ಸಿದ್ಧಾರ್ಥ ಮಹಾವಿದ್ಯಾಲಯ, 10ರಂದು ಬೆಂಗಳೂರಿನ ಎನ್.ಎಂ.ಕೆ. ಆರ್.ವಿ ಮಹಿಳಾ ವಿದ್ಯಾಲಯ, 11ರಂದು ಶ್ರೀ ಲ.ನ. ವಿದ್ಯಾಸಂಸ್ಥೆ, 12ರಂದು ಜಗದ್ಗುರು ರೇಣುಕಾಚಾರ್ಯ ವಿದ್ಯಾಲಯದಲ್ಲಿ ಉಪನ್ಯಾಸ ಸರಣಿ ನಡೆಯಲಿದೆ.
13ರಂದು ಮಂಡ್ಯದ ಪಿ.ಇ.ಎಸ್. ಕಾಲೇಜಿನಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿ ಚುಂಚನಗಿರಿಯ ಮಠಾಧೀಶರಾದ ಶ್ರೀ ಬಾಲಗಂಗಾಧರ ನಾಥ ಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಡಿ.ಎಂ. ನಂಜುಂಡಪ್ಪ, ಶ್ರೀ ರಾಮಕೃಷ್ಣ ಮಠದ ಸ್ವಾಮಿ ರಾಘವೇಶಾನಂದಜೀ, ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್, ತುಮಕೂರು ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಹಾಗೂ ತುಮಕೂರು ಜಿಲ್ಲಾಧಿಕಾರಿ ಜಯರಾಮರಾಜೇ ಅರಸ್, ಪ್ರೊ. ಕೃಷ್ಣಸ್ವಾಮಿ, ಜಿ. ನಾರಾಯಣ್, ಎಚ್. ನರಸಿಂಹಯ್ಯ, ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಸ್ವಾಮಿ ವಿವೇಕಾನಂದರ ಪುಸ್ತಕ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಸ್ವಾಮಿ ವಿವೇಕಾನಂದ ಪ್ರಸಾರ ಕೇಂದ್ರದ ಸುಂದರ್‌ರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications