ಮೂಡಿಬಿದ್ರೆ, ಆಗುಂಬೆ, ಕಾರ್ಕಳದಲ್ಲಿ ಮಳೆ
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಚದುರಿದಂತೆ ಮಳೆ ಬಿದ್ದಿದೆ. ಮೂಡಿಬಿದ್ರೆಯಲ್ಲಿ 4 ಸೆಂಟಿ ಮೀಟರ್, ಕಾರ್ಕಳ ಹಾಗೂ ಆಗುಂಬೆಗಳಲ್ಲಿ ತಲಾ ಒಂದು ಸೆಂಟಿ ಮೀಟರ್ ಮಳೆ ಆಗಿದೆ. ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೂ ಕವಿದಿದ್ದ ಮೋಡ ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಚದುರಿದ್ದು, ಬಿಸಿಲು ಮೂಡಿದೆ.
ರಾಜ್ಯದಲ್ಲಿ ರಾತ್ರಿಯ ಕನಿಷ್ಠ ತಾಪಮಾನದಲ್ಲಿ ಸುಧಾರಣೆ ಕಂಡು ಬಂದಿದ್ದು, ದಕ್ಷಿಣ ಒಳನಾಡು, ಕರಾವಳಿಯ ಅನೇಕ ಕಡೆಗಳಲ್ಲಿ ಸಾಮಾನ್ಯ ಮಟ್ಟಕ್ಕಿಂತಲೂ ಹೆಚ್ಚಿದೆ. ಚಳಿಯ ಕೊರೆತ ಕಡಿಮೆಯಾಗುತ್ತಿದೆ ಎನ್ನಿಸುತ್ತಿದೆ. ಬೆಂಗಳೂರಿನಲ್ಲಿ ಕೂಡ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.
ಹವಾಮಾನ ವೀಕ್ಷಣಾಲಯದ ವರದಿಗಳ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವು ಕಡೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ರಾತ್ರಿಯ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸೂಚನೆ ಇದೆ. ಗುಲ್ಬರ್ಗಾದಲ್ಲಿ ಕೂಡ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡು ಬಂದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications