ಮಾಂಜ್ರಾ ನದಿಯಲ್ಲಿ ದೋಣಿ ಮುಳುಗಿ 7 ಸಾವು
ಬೀದರ್ : ಇಲ್ಲಿಗೆ 15 ಕಿ.ಮೀಟರ್ ದೂರದ ಕರ್ನಾಟಕ -ಆಂಧ್ರಪ್ರದೇಶ ಗಡಿ ಗ್ರಾಮವಾದ ಕಾರಾಮಂಗಿಯ ಬಳಿ ಮಾಂಜ್ರಾ ನದಿಯಲ್ಲಿ ನಾಡ ದೋಣಿ ಮುಳುಗಿದ ಪರಿಣಾಮವಾಗಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.
ಮಾಂಜ್ರಾ ನದಿ ಪಾಲಾದವರನ್ನು ಕೃಷ್ಣಮ್ಮ (40), ಶ್ರೀಕಾಂತ (20), ಮಾಣಿಕ ರಾವ್ (35), ಕಿಶೋರ್ (11), ಜಗದೇವಿ (18) ಹಾಗೂ ಕಲ್ಪನಾ ಮತ್ತು ಕಲ್ಲಪ್ಪ ಎಂದು ಗುರುತಿಸಲಾಗಿದೆ. ಗೋವಿಂದ್ ಹಾಗೂ ನರಸಿಂಗ್ ಎಂಬಿಬ್ಬರು ಮಾತ್ರ ಈಜಿ ದಡ ಸೇರಿದ್ದಾರೆ.
ಭಾನುವಾರ ಮಧ್ಯಾಹ್ನ ಒಂದೇ ಕುಟುಂಬಕ್ಕೆ ಸೇರಿದ 9 ಮಂದಿ ಕಾರಾಮಂಗಿಯಿಂದ ಚಿಮಕೋಡ್ ಗ್ರಾಮಕ್ಕೆ ಹೋಗಲು ದೋಣಿ ಏರಿದ್ದರು. ಆರು ಜನರನ್ನು ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ್ದ ನಾಡದೋಣಿ (ತೆಪ್ಪ) 9 ಜನರ ಭಾರವನ್ನು ತಾಳಲಾರದೆ ನದಿಯಲ್ಲಿ ಮುಳುಗಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ದುರಂತದಲ್ಲಿ ಸಾವನ್ನಪ್ಪಿದ ಮಾಣಿಕ ರಾವ್ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಲಿ 5 ಶವಗಳು ಪತ್ತೆಯಾಗಿದ್ದು, ಉಳಿದೆರಡು ಶವಗಳಿಗಾಗಿ ಶೋಧ ಮುಂದುವರಿದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications