ವಿದ್ಯುತ್ ಉತ್ಪಾದನೆ: ದಾಖಲೆ ಮೆರೆದರಾಯಚೂರು ಶಾಖೋತ್ಪನ್ನ ಕೇಂದ್ರ
ಬೆಂಗಳೂರು : ಹೊಸ ಸಹಸ್ರಮಾನದ ಪ್ರಥಮ ವರ್ಷದ ಅಂತ್ಯಕ್ಕೆ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆಯನ್ನು ಸ್ಥಾಪಿಸುವ ಮೂಲಕ ನೂತನ ವರ್ಷಕ್ಕೆ ಹರ್ಷದಿಂದಲೇ ಕಾಲಿರಿಸಿದೆ.
ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆರು ಘಟಕಗಳು ಡಿಸೆಂಬರ್ 31ರಂದು 30 ಸಾವಿರದ 659 ದಶಲಕ್ಷ ಯುನಿಟ್ ವಿದ್ಯುತ್ ಉತ್ಪಾದಿಸುವ ಮೂಲಕ ದಾಖಲೆಯ ವಿದ್ಯುತ್ ಉತ್ಪಾದನೆ ವಿಕ್ರಮ ಮೆರೆದಿವೆ. ಈ ವಿಷಯವನ್ನು ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜ್ಯೋತಿ ರಾಮಲಿಂಗಂ ತಿಳಿಸಿದ್ದಾರೆ.
ಈ ಆರೂ ಘಟಕಗಳ ಉತ್ಪಾದನಾ ಸಾಮರ್ಥ್ಯದ ಶೇಕಡಾ 101.39ರಷ್ಟು ಬಳಕೆ ಆಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಘಟಕಗಳು 1519 ದಶಲಕ್ಷ ಯುನಿಟ್ ವಿದ್ಯುತ್ತನ್ನು ಹೆಚ್ಚುವರಿಯಾಗಿ ಉತ್ಪಾದಿಸಿವೆ. ಈ ಸಾಧನೆಗೆ ಕಾರಣವಾದ ರಾಯಚೂರು ಶಾಖೋತ್ಪನ್ನ ಘಟಕದ ಎಲ್ಲ ಸಿಬ್ಬಂದಿಯನ್ನು ರಾಮಲಿಂಗಂ ಅಭಿನಂದಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications