ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನೈದು ಹೊಸ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಅನುಮತಿ

By Staff
|
Google Oneindia Kannada News

ಬೆಂಗಳೂರು : ಕರ್ನಾಟಕದಲ್ಲಿ ಇನ್ನೂ 5 ಹೊಸ ಎಂಜಿನಿಯರಿಂಗ್‌ ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಬರುವ ಶೈಕ್ಷಣಿಕ ವರ್ಷದಿಂದ ಒಟ್ಟು 41 ಹೊಸ ಎಂಜಿನಿಯರಿಂಗ್‌ ಕಾಲೇಜುಗಳು ಬಾಗಿಲು ತೆರೆಯಲಿವೆ.

ಈ ಹಿಂದೆ ಉಪ ಸಮಿತಿ ಶಿಫಾರಸ್ಸಿಗೆ ಅನುಗುಣವಾಗಿ ರಾಜ್ಯ ಸಚಿವ ಸಂಪುಟ 36 ಹೊಸ ಎಂಜಿನಿಯರಿಂಗ್‌ ಕಾಲೇಜುಗಳ ಸ್ಥಾಪನೆಗೆ ಒಪ್ಪಿಗೆ ನೀಡಿತ್ತು. ನಂತರ 5 ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಅವುಗಳಿಗೂ ಸಂಪುಟ ಅಸ್ತು ಎಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್‌ ಖಾಸಗಿ ಟಿವಿ ಚಾನೆಲೊಂದಕ್ಕೆ ಕೊಟ್ಟಿರುವ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ್ದಾರೆ.

ವಿವಿ ಸೆನೆಟ್‌ ರದ್ದು : ವಿಶ್ವ ವಿದ್ಯಾಲಯಗಳಲ್ಲಿನ ಸೆನೆಟ್ಟನ್ನು ರದ್ದು ಪಡಿಸಲು ಸರ್ಕಾರ ನಿರ್ಧರಿಸಿದೆ. ಸಿಂಡಿಕೇಟ್‌, ಶಿಕ್ಷಣ ಸಮಿತಿಗಳೂ ವಿಶ್ವವಿದ್ಯಾಲಯಗಳಲ್ಲಿದ್ದು, ಹೆಚ್ಚೂ ಕಮ್ಮಿ ಸೆನೆಟ್‌ನ ಕೆಲಸವನ್ನೇ ಮಾಡುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X