ಮುಂದಿನ 20 ವರ್ಷದಲ್ಲಿ ಹಸಿವು, ಬಡತನದಿಂದಮುಕ್ತವಾಗಲಿದೆ ಭಾರತ
ನವದೆಹಲಿ : ದೇಶದ ವೈಜ್ಞಾನಿಕ ಪ್ರಗತಿಯ ಜತೆಗೆ ಸ್ವದೇಶೀ ಯುಕ್ತಿ, ಜ್ಞಾನ ಹಾಗೂ ವಿಶಿಷ್ಟ ಸಾಮಾಜಿಕ ಪರಂಪರೆ ಮೇಳೈಸಿರುವ ಹಿನ್ನೆಲೆಯಲ್ಲಿ 2020ನೇ ಇಸವಿಯ ಒಳಗೆ ಭಾರತ ಬಡತನ, ಹಸಿವು, ಪೌಷ್ಟಿಕತೆಯ ಕೊರತೆಯಿಂದ ಮುಕ್ತವಾಗಿ, ಮುಂದುವರಿಯುತ್ತಿರುವ ರಾಷ್ಟ್ರಕ್ಕೆ ಮಾದರಿಯಾಗಲಿದೆ. ಈ ವಿಷಯವನ್ನು 88ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಬಿಡುಗಡೆ ಮಾಡಿರುವ ದೂರದೃಷ್ಟಿ ವರದಿಯಲ್ಲಿ ತಿಳಿಸಲಾಗಿದೆ.
ದೇಶವು ಆಹಾರ ಸ್ವಾವಲಂಬನೆ ಸಾಧಿಸಲು ಕೃಷಿ ಕ್ಷೇತ್ರದೊಂದಿಗೆ ಉದ್ಯಮ, ಆರೋಗ್ಯ, ಶಿಕ್ಷಣ ರಂಗಗಳು ಕೂಡ ಮಹತ್ವದ ಪಾತ್ರ ವಹಿಸಲಿವೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ. ತೋಟಗಾರಿಕೆಯ ಉತ್ಪಾದನೆಯನ್ನು ಹೆಚ್ಚಿಸಲು ವಿಜ್ಞಾನ ಮತ್ತು ತಂತ್ರಜ್ಞಾನ, ಸಂಘಟನೆ ಹಾಗೂ ಸಾರ್ವಜನಿಕ ನೀತಿಗೆ ಪ್ರಾಧಾನ್ಯತೆ ನೀಡಬೇಕು ಎಂಬ ಅಂಶಗಳೂ ವರದಿಯಲ್ಲಿ ಅಡಕವಾಗಿವೆ.
ಆರ್ಥಿಕ ನೆರವು: ವೈಜ್ಞಾನಿಕ ಸಂಶೋಧನೆಗೆ ಹೆಚ್ಚಿನ ಹಣಕಾಸು ನೆರವು, ಉನ್ನತ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ವೈಚಾರಿಕ ಪರಿವರ್ತನೆಗೆ ಒತ್ತು ನೀಡುವುದಾಗಿ ಪ್ರಧಾನಿ ವಿಜ್ಞಾನಿಗಳ ಸಮುದಾಯಕ್ಕೆ ಭರವಸೆ ನೀಡಿದ್ದಾರೆ. ಪೊಖ್ರಾನ್‌ನಲ್ಲಿ ಅಣು ಬಾಂಬ್ ಪರೀಕ್ಷಾರ್ಥ ಪ್ರಯೋಗ ನಡೆದಾಗ ಜೈಜವಾನ್ - ಜೈ ಕಿಸಾನ್ ಜತೆ ಜೈ ವಿಜ್ಞಾನ್ ಎಂಬ ಪದ ಸೇರಿಸಿದ್ದ ಪ್ರಧಾನಿ ವಾಜಪೇಯಿ ಅವರು ವಿಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಇತರ ದೇಶಗಳಿಗಿಂತಲೂ ಮುಂದಕ್ಕೆ ಕೊಂಡೊಯ್ಯುವಂತೆ ವಿಜ್ಞಾನಿಗಳಿಗೆ ಕರೆ ನೀಡಿದ್ದಾರೆ.
ಇಲ್ಲಿ ಬುಧವಾರ ಆರಂಭಗೊಂಡ 88ನೇ ವಿಜ್ಞಾನ ಕಾಂಗ್ರೆಸ್‌ನಲ್ಲಿ ಅವರು ಮಾತನಾಡುತ್ತಿದ್ದರು. ಜಾಗತಿಕ ಸ್ಪರ್ಧೆಯ ನಡುವೆ ಲಭ್ಯವಿರುವ ಎಲ್ಲ ಅವಕಾಶಗಳನ್ನೂ ಬಳಸಿಕೊಂಡು ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮುಂದಾಗಬೇಕೆಂದೂ ಅವರು ಹೇಳಿದ್ದಾರೆ.
ಸಾಫ್ಟ್‌ವೇರ್ ಬೇಡಿಕೆ ಬಗ್ಗೆ ಕಳವಳ : ತಾಂತ್ರಿಕ ಸಿಬ್ಬಂದಿಯ ಬೇಡಿಕೆ ಮತ್ತು ಪೂರೈಕೆಯ ನಡುವಿನ ಅಂತರವನ್ನು ಬೆಸೆಯಲು ತಾಂತ್ರಿಕ ಶಿಕ್ಷಣದ ರಾಷ್ಟ್ರೀಯ ಮಂಡಳಿಯನ್ನು ರಚಿಸಲಾಗುವುದು ಎಂದೂ ಅವರು ಹೇಳಿದರು. ಭಾರತದ ಸಾಫ್ಟ್‌ವೇರ್ ತಂತ್ರಜ್ಞರಿಗೆ ದೇಶದಲ್ಲಿ ಹಾಗೂ ವಿದೇಶದಲ್ಲಿ ಭಾರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ, ಉನ್ನತ ಅಧ್ಯಯನ, ಸಂಶೋಧನೆಯನ್ನು ಕೈಬಿಟ್ಟು ಸಾಫ್ಟ್‌ವೇರ್‌ನತ್ತಲೇ ವಾಲುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.
ಈ ಹಂತದಲ್ಲೇ ಇದನ್ನು ಹತ್ತಿಕ್ಕಿ, ಸಂಶೋಧನೆಗೆ ಹೆಚ್ಚಿನ ಒತ್ತು ನೀಡದಿದ್ದರೆ, ಮುಂದೆ ಉತ್ತಮ ದರ್ಜೆಯ ಶಿಕ್ಷಕರು, ವಿಜ್ಞಾನ ಸಂಶೋಧಕರ ಕೊರತೆಯನ್ನು ರಾಷ್ಟ್ರ ಎದುರಿಸಬೇಕಾಗುತ್ತದೆ ಎಂದೂ ಅವರು ತಮ್ಮ ಸಮಸ್ರಮಾನದ ಭಾಷಣದಲ್ಲಿ ದೇಶದ ಜನತೆಗೆ ಎಚ್ಚರಿಕೆ ನೀಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications