ಎಲ್ಟಿಟಿಇ ನಿಷೇಧ ರದ್ದು ಪಡಿಸಲು ನೆಡುಮಾರನ್ ಆಗ್ರಹ
ತಿರುಚನಾಪಲ್ಲಿ : ಬೆಂಗಳೂರಿನಲ್ಲಿ ನೆಡುಮಾರನ್ರ ಸನ್ಮಾನದ ಗಳಿಗೆ ಹತ್ತಿರವಾಗುತ್ತಿದ್ದಂತೆ ಪರ ವಿರೋಧದ ಕಾವು ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬೆನ್ನಿನಲ್ಲೇ, ಎಲ್ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಎಂದು ತಮಿಳು ರಾಷ್ಟ್ರೀಯ ಆಂದೋಲನದ ನಾಯಕ ಪಿ. ನೆಡುಮಾರನ್ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಉಭಯ ರಾಜ್ಯ ಸರ್ಕಾರಗಳು ಕ್ಷಮಾದಾನ ನೀಡಲು ಮುಂದಾದಲ್ಲಿ ತಾವು ವೀರಪ್ಪನ್ ಶರಣಾಗತಿಗೆ ಪ್ರಯತ್ನ ನಡೆಸುವುದಾಗಿ ಹೇಳಿದರು. ನರಹಂತಕ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎನ್ನುವ ತಮ್ಮ ನಿಲುವನ್ನು ಅವರು ಪುನರುಚ್ಚರಿಸಿದ ಅವರು, ಕಾರ್ಯಾಚರಣೆಯ ವಿರುದ್ಧ ಉಭಯ ರಾಜ್ಯಗಳ ಜನಾಂದೋಲನ ಸಂಘಟಿಸುವುದಾಗಿ ಹೇಳಿಕೊಂಡರು.
ರಾಜ್ ಬಿಡುಗಡೆ ಸಂದರ್ಭದಲ್ಲಿ ವೀರಪ್ಪನ್ ಮಂಡಿಸಿದ್ದ ಕೆಲವು ಬೇಡಿಕೆಗಳನ್ನು ಈಡೇರಿಸಲು ಉಭಯ ರಾಜ್ಯ ಸರ್ಕಾರಗಳು ಈಗಾಗಲೇ ಒಪ್ಪಿಕೊಂಡಿವೆ. ಟಾಡಾ ಬಂಧಿಗಳ ಬಿಡುಗಡೆ ಸೇರಿದಂತೆ ಕೆಲವು ಬೇಡಿಕೆಗಳು ಮಾತ್ರ ಕಾನೂನು ತೊಡಕಿನಿಂದ ಬಾಕಿಯುಳಿದಿವೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಏರ್ಪಾಡಾಗಿರುವ ಸನ್ಮಾನ ಕಾರ್ಯಕ್ರಮ ಪೂರ್ವಯೋಜನೆಯಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ ನೆಡುಮಾರನ್, ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಕೃಷ್ಣ ಅವರನ್ನು ಭೇಟಿ ಮಾಡುವ ಯಾವುದೇ ಯೋಜನೆ ತಮ್ಮ ಮುಂದಿಲ್ಲ ಎಂದರು.
(ಯುಎನ್ಐ)
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications