ಉತ್ತರ ಭಾರತದ ಚಳಿಗೆ 23 ಜನರ ಬಲಿ
ಬೆಂಗಳೂರು : ಉತ್ತರ ಭಾರತದಲ್ಲಿ ಭೀಕರ ಚಳಿ ಪ್ರಾರಂಭವಾಗಿದೆ. ತೀವ್ರತರವಾದ ಚಳಿಯನ್ನು ತಡೆಯಲಾರದೆ ಉತ್ತರ ಪ್ರದೇಶದಲ್ಲಿ ಗುರುವಾರ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ. ಬರೇಲಿಯಲ್ಲಿ 7, ಆಗ್ರಾ ಮತ್ತು ಅಂಬೇಡ್ಕರ್ ನಗರಗಳಲ್ಲಿ ತಲಾ ಐವರು ಸತ್ತಿದ್ದಾರೆ, ಬಲ್ಲಿಯಾ, ಸಿದ್ಧಾರ್ಥನಗರಗಳಲ್ಲಿ ಅನುಕ್ರಮವಾಗಿ ಮೂವರು ಹಾಗೂ ಇಬ್ಬರು ಸತ್ತಿದ್ದಾರೆ.
ಅಲ್ಲಿ ಕನಿಷ್ಠ ತಾಪಮಾನ ಮೈನಸ್ 15ರವರೆಗೆ ಮುಟ್ಟಿದೆ. ರಸ್ತೆಗಳೆಲ್ಲ ದಟ್ಟವಾದ ಹಿಮದಿಂದ ಆವೃತವಾಗಿವೆ. ಇನ್ನೂ ಎರಡು ಮೂರು ದಿನ ಪರಿಸ್ಥಿತಿ ಹೀಗೆ ಇರಲಿದೆ ಎಂದಿವೆ ವರದಿಗಳು. ಕರ್ನಾಟಕದ ಮಂದಿ ಈ ವಿಷಯದಲ್ಲಿ ಬಹಳ ಪುಣ್ಯವಂತರು. ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದಾಗ್ಯೂ ಕೂಡ, ಕರ್ನಾಟಕದ ಹವಾಮಾನದ ದೃಷ್ಟಿಯಿಂದ ಭೂಲೋಕದ ಸ್ವರ್ಗವೇ ಸರಿ.
ಆದರೂ, ನಮ್ಮ ದೇಶದ ಇತರ ರಾಜ್ಯಗಳ ಜನತೆ ಅನುಭವಿಸುತ್ತಿರುವ ನೋವಿನ ಸುದ್ದಿಯ ಕೇಳಿಯೇ ದುಃಖ ಉಮ್ಮಳಿಸುತ್ತದೆ. ಎಲ್ಲರೂ ಚೆನ್ನಾಗಿರಲಿ ಎಂದು ನಾವೆಲ್ಲರೂ ಹಾರೈಸೋಣ. If wishes were horses fools will ride ಎನ್ನುತ್ತೀರೇನು?
ಈ ಮಧ್ಯೆ ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಇತ್ತು. ಕರಾವಳಿ ಹಾಗೂ ಒಳನಾಡಿನ ಅನೇಕ ಕಡೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಕಂಡು ಬಂದಿದೆ. ಕರಾವಳಿ ಹಾಗೂ ಒಳನಾಡಿನ ಅನೇಕ ಕಡೆ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ರಾಜ್ಯದ ಅತಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಹೆಚ್ಚಿನ ಬದಲಾವಣೆಗಳೇನೂ ಇಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications