28ರಂದು ನಡೆಯಬೇಕಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಕ್ಕೆ
ಬೆಂಗಳೂರು : ಇದೇ ತಿಂಗಳ 28ರಂದು ರಾಜ್ಯದ 147 ಸ್ಥಳೀಯ ಸಂಸ್ಥೆಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿ, ಇನ್ನು 6 ವಾರದೊಳಗೆ ಸಂವಿಧಾನಬದ್ಧವಾಗಿ ವಾರ್ಡ್‌ಗಳ ಸರದಿ ಮೀಸಲಾತಿಯನ್ನು ನಿರ್ಧರಿಸುವ ಮಾನದಂಡಗಳನ್ನು ನಿರ್ಧರಿಸಿ, ಹೊಸದಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ.
ಈಗಾಗಲೇ ವಾರ್ಡ್‌ಗಳ ಮೀಸಲಾತಿ ನಿಗದಿ ಮಾಡಿ ಹೊರಡಿಸಲಾಗಿರುವ ಅಧಿಸೂಚನೆಯನ್ನು ವಾಪಸು ಪಡೆಯಲಾಗುವುದು ಎಂದು ನಗರಾಭಿವೃದ್ಧಿ ಸಚಿವಾಲಯದ ಪರವಾಗಿ ಅಡ್ವೋಕೇಟ್ ಜನರಲ್ ಕೋರ್ಟ್‌ಗೆ ತಿಳಿಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಈ ಆದೇಶ ಹೊರಡಿಸಿದರು.
ಆದರೆ, ವಿವಿಧ ವರ್ಗಗಳಿಗೆ ವಾರ್ಡ್‌ಗಳಲ್ಲಿ ಸರದಿ ಮೀಸಲಾತಿ ನಿರ್ಧರಿಸಲು ಅಗತ್ಯವಾದ ಮಾನದಂಡ ಸಿದ್ಧಪಡಿಸಲು ಕನಿಷ್ಠ ನಾಲ್ಕು ತಿಂಗಳ ಕಾಲ ಕಾಲಾವಕಾಶ ಕೇಳಿದ ಅಡ್ವೋಕೇಟ್ ಜನರಲ್ ಎ.ಎನ್. ಜಯರಾಂ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳು ಕೇವಲ ಆರು ವಾರಗಳ ಕಾಲಾವಕಾಶ ನೀಡಿದರು.
ಚುನಾಯಿತ ಪ್ರತಿನಿಧಿಗಳಿಲ್ಲದೆ ಸ್ಥಳೀಯ ಸಂಸ್ಥೆಗಳನ್ನು ದೀರ್ಘಾವಧಿ ಕಾಲದವರೆಗೆ ಖಾಲಿ ಬಿಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಧುವಲ್ಲ ಎಂದು ನ್ಯಾಯಮೂರ್ತಿಗಳಾದ ಜಿ.ಸಿ. ಭರೂಕ ಹಾಗೂ ಕೆ. ಶ್ರೀಧರರಾವ್ ಅವರನ್ನೊಳಗೊಂಡ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ವಾರ್ಡ್ ಮೀಸಲಾತಿಗೆ ಅನುಸರಿಸಿದ ಮಾನದಂಡಗಳನ್ನು ತಿಳಿಸಿ ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರದ ಬಗ್ಗೆ ವಿಭಾಗೀಯ ಪೀಠ ತೀವ್ರ ಅಸಮಾಧಾನವನ್ನೂ ವ್ಯಕ್ತಪಡಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications