ಮುಂದಿನ ತಿಂಗಳು ಜಿಎಸ್ಎಲ್ವಿ ಉಡಾವಣೆ : ಕಸ್ತೂರಿ ರಂಗನ್
ನವದೆಹಲಿ : ಭಾರತದ ಅತಿ ದೊಡ್ಡ ರ್ಯಾಕೆಟ್ ಉಡಾವಣಾ ವಾಹನ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಿಎಸ್ಎಲ್ವಿಯನ್ನು ಫೆಬ್ರುವರಿ ತಿಂಗಳಿನಲ್ಲಿ ಅಂತರಿಕ್ಷಕ್ಕೆ ಹಾರಿ ಬಿಡಲು ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಧೆ ನಿರ್ಧರಿಸಿದೆ.
ಈ ವಿಷಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ತಿಳಿಸಿದ್ದಾರೆ. ಇಲ್ಲಿ ಜರುಗಿದ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಂದಿನ ತಿಂಗಳು ಹಾರಿ ಬಿಡಲಾಗುವ ಈ ಉಪಗ್ರಹ ಉಡಾವಣೆಗೆ ಸಂಬಂಧಿಸಿದಂತೆ ವಿಧಿ ವಿಧಾನಗಳು ಕಾರ್ಯಾಚರಣೆಯಲ್ಲಿವೆ ಎಂದೂ ಹೇಳಿದರು.
1999ರ ಅಕ್ಟೋಬರ್ ತಿಂಗಳಿನಲ್ಲಿಯೇ ಜಿಎಸ್ಎಲ್ವಿಯನ್ನು ಅಂತರಿಕ್ಷಕ್ಕೆ ಹಾರಿ ಬಿಡುವ ಯೋಜನೆ ಇತ್ತು. ಆದರೆ, ಕಾರಣಾಂತರದಿಂದ ಎರಡು ಬಾರಿ ಉಡಾವಣೆ ಮುಂದೂಡಲ್ಪಟ್ಟಿತು ಎಂದೂ ತಿಳಿಸಿದರು. ಭೂಮಿಯಿಂದ ಮೇಲಕ್ಕೆ 36,000 ಕಿ.ಮೀಟರ್ ಕಕ್ಷೆಯಲ್ಲಿ ಸುಮಾರು 2000 ಕೆ.ಜಿ. ತೂಕದ ಉಪಗ್ರಹ ಕೊಂಡೊಯ್ಯುವ ಸಾಮರ್ಥ್ಯದೊಂದಿಗೆ ಜಿ.ಎಸ್.ಎಲ್.ವಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದೂ ಅವರು ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications