ಕೋಲಾಗೆ ನೀಡಿರುವ ತೆರಿಗೆ ವಿನಾಯಿತಿಯನ್ನು ಸ್ಥಳೀಯರಿಗೂ ನೀಡಿ
(ಮಂಗಳೂರು ಪ್ರತಿನಿಧಿಯಿಂದ)
ಮಂಗಳೂರು : ಬಹುರಾಷ್ಟ್ರೀಯ ಕಂಪನಿ ಕೋಕಾಕೋಲಾದ ಉತ್ಪನ್ನಗಳಿಗೆ ನೀಡಿರುವ ತೆರಿಗೆ ವಿನಾಯಿತಿಯನ್ನು ಸ್ಥಳೀಯರಿಗೂ ವಿಸ್ತರಿಸಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಲಘು ಪಾನೀಯ ತಯಾರಿಕಾ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಹುರಾಷ್ಟ್ರೀಯ ಲಘು ಪಾನೀಯ ತಯಾರಿಕ ಸಂಸ್ಥೆಗಳ ಅಪ್ಪಳಿಸುವಿಕೆಯಲ್ಲಿ ದೇಶೀಯ ಲಘು ಪಾನೀಯ ಘಟಕಗಳು ಕೊಚ್ಚಿ ಹೋಗುತ್ತಿವೆ. ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಪ್ರಸ್ತುತ 200 ಲಘು ಪಾನೀಯ ತಯಾರಿಕಾ ಘಟಕಗಳದ್ದು ಅವುಗಳಲ್ಲಿ 100 ಘಟಕಗಳು ಕದ ಮುಚ್ಚುವ ಆತಂಕ ಎದುರಿಸುತ್ತಿವೆ. ತೆರಿಗೆ ವಿನಾಯಿತಿ ನೀಡುವುದರಿಂದ ಇಂಥಾ ಘಟಕಗಳು ಉಸಿರಾಡಲು ಸಾಧ್ಯವಾಗಬಹುದು ಎಂದು ಶೆಟ್ಟಿ ಮಂಗಳೂರಿನ ಇಂಡಿಯಾ ಇನ್ಫೋ ಪ್ರತಿನಿಧಿಗೆ ತಿಳಿಸಿದರು.
ಕೆಲವು ಸ್ಥಳೀಯ ಲಘು ಪಾನೀಯ ತಯಾರಕರು ಯಾವುದೇ ಠೇವಣಿ ಪಡೆಯದೆ ತಮ್ಮ ಬಾಟಲಿಗಳನ್ನು ವ್ಯಾಪಾರಿಗಳಿಗೆ ನೀಡುತ್ತಿದ್ದಾರೆ. ಈ ಬಾಟಲಿಗಳಲ್ಲಿ ಕಲಬೆರಕೆ ಮಾಡುತ್ತಿರುವ ಪ್ರಕರಣಗಳು ಸಂಘದ ಗಮನಕ್ಕೆ ಬಂದಿದ್ದು , ಇಂಥಾ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಗೋಪಾಲಶೆಟ್ಟಿ ಹೇಳಿದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications