2 ಅಂಗಡಿಗಳಿಗೆ ಬೆಂಕಿ : ರಾಣಿ ಬೆನ್ನೂರಲ್ಲಿ ಕುದಿಮೌನ
ಹುಬ್ಬಳ್ಳಿ : ಭಾನುವಾರ ರಾತ್ರಿ ಕೆಲ ದುಷ್ಕರ್ಮಿಗಳು 2 ಅಂಗಡಿಗಳಿಗೆ ಬೆಂಕಿ ಇಟ್ಟ ಪರಿಣಾಮ ಹಾವೇರಿ ಜಿಲ್ಲೆಯ ರಾಣಿ ಬೆನ್ನೂರಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಮಾರು 10 ದುಷ್ಕರ್ಮಿಗಳು ಅಂಗಡಿಗಳಿಗೆ ಬೆಂಕಿ ಇಟ್ಟಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳದವರಿಗೆ ಒಂದು ತಾಸೂ ಸಾಕಾಗಲಿಲ್ಲ. ಮಾರುಕಟ್ಟೆಯಲ್ಲಿ ಜನ ಗುಂಪುಗಟ್ಟಿದರು. ವರ್ತಕರು ಘಟನೆಯನ್ನು ಪ್ರತಿಭಟಿಸಿ ಸೋಮವಾರ ಒಂದು ದಿನದ ಬಂದ್ ಆಚರಿಸುವುದಾಗಿ ಹೇಳಿದರು. ಆದರೆ ಸ್ಥಳೀಯ ದೇವಾಲಯದಲ್ಲಿ ಸೋಮವಾರ ಜಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂದ್ ನಡೆಸದಂತೆ ಅವರಿಗೆ ಮನವರಿಕೆ ಮಾಡಿಸುವಲ್ಲಿ ಪೊಲೀಸರು ಯಶಸ್ವಿಯಾದರು.
ಪ್ರಸ್ತುತ ಪರಿಸ್ಥಿತಿ ತಹಬಂದಿಗೆ ಬಂದಿದ್ದು , ರಾಣಿ ಬೆನ್ನೂರು ಶಾಂತವಾಗಿದೆ. ಪೊಲೀಸರು ಊರಿನ ತುಂಬಾ ಗಸ್ತು ಹೊಡೆಯುತ್ತಿದ್ದಾರೆ. ಘಟನೆ ಕುರಿತು ಬೆಂಗಳೂರಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೃಷ್ಣ , ಈ ಘಟನೆಗೆ ರೆಕ್ಕೆಪುಕ್ಕ ಹರಡಿ ಹಿಂಸೆ ತಾಂಡವವಾಡದಂತೆ ಪೊಲೀಸರು ದುರ್ವತನೆಯನ್ನು ಸದ್ದಿಲ್ಲದೆ ಹತ್ತಿಕ್ಕಿದ್ದಾರೆ. ಹುಚ್ಚು ಜನರ ಇಂಥ ದುರ್ವರ್ತನೆಗಳನ್ನು ತಡೆಯಬೇಕಾದ್ದು ಅತ್ಯವಶ್ಯಕ ಎಂದಿದ್ದಾರೆ.
(ಯುಎನ್ಐ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications