ಶುಲ್ಕ ಹೆಚ್ಚಳ : ಹುಬ್ಬಳ್ಳಿಯಲ್ಲಿ ಸಚಿವ ಹಿಂಡಸಗೇರಿ ಮನೆ ಘೕರಾವ್
ಹುಬ್ಬಳ್ಳಿ : ಶಿಕ್ಷಣ ಶುಲ್ಕ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲಾ ಉಸ್ತುವಾರಿ ಸಚಿವ ಎ.ಎಂ. ಹಿಂಡಸಗೇರಿ ಅವರನ್ನು ಅವರ ಮನೆಯಲ್ಲೇ ಸೋಮವಾರ ಘೕರಾವ್ ಮಾಡಿದರು.
ಶುಲ್ಕ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಲು ತರಗತಿಗಳನ್ನು ಬಹಿಷ್ಕರಿಸಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ತೆರಳಿ, ಘೕರಾವ್ ಮಾಡಿದರು. ಶುಲ್ಕ ಹೆಚ್ಚಳ ಹಿಂತೆಗೆದುಕೊಳ್ಳುವ ಸಂಬಂಧ ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಸಚಿವರಿಂದ ಭರವಸೆ ದೊರೆತ ನಂತರ ಪ್ರತಿಭಟನಾಕಾರರು, ಶಾಂತಿಯುತವಾಗಿ ಹಿಂತಿರುಗಿದರು.
ಶಿರಸಿ ವರದಿ : ಇಲ್ಲಿನ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ಬಹಿಷ್ಕರಿಸಿ, ಸರ್ಕಾರದ ಶಿಕ್ಷಣ ಶುಲ್ಕ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವಿಷಯವನ್ನು ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಾಯಕರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಈ ವಿಷಯವನ್ನು ಕರ್ನಾಟಕ ವಿಶ್ವವಿದ್ಯಾಲಯದ ಅಧಿಕಾರಿಗಳ ಜತೆ ಚರ್ಚಿಸಿ, ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ಶಿರಸಿ ತಹಶೀಲ್ದಾರ್ ಎಂ. ರಘುನಾಥ್ ನೀಡಿದರು ಎಂದು ವಿದ್ಯಾರ್ಥಿ ಮುಖಂಡರು ತಿಳಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಾಯಕರು, ಸಹಾಯಕ ಜಿಲ್ಲಾಧಿಕಾರಿ ನವೀನ್ ರಾಜ್ ಸಿಂಗ್ ಅವರಿಗೆ ಈ ಸಂಬಂಧ ಮನವಿ ಪತ್ರವನ್ನೂ ಅರ್ಪಿಸಿದ್ದಾರೆ. (ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications