ಬೆಂಗಳೂರು ಸ್ವಚ್ಛಗೊಳಿಸಲು ಪಾಲಿಕೆಗೆ ಮುಖ್ಯಮಂತ್ರಿ ಗಡುವು
ಬೆಂಗಳೂರು : ನಗರವನ್ನು ಕಸರಹಿತ ಹಾಗೂ ಇಲ್ಲಿನ ಗೋಡೆಗಳನ್ನು ಚೀಟಿರಹಿತವನ್ನಾಗಿಸಲು ಬೆಂಗಳೂರು ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಈ ತಿಂಗಳ ಗಡುವನ್ನು ಕೊಟ್ಟಿದ್ದಾರೆ.
ತಮ್ಮ ದೇಹಸ್ಥಿತಿ ಸರಿಯಿಲ್ಲದ ಕಾರಣ ದೆಹಲಿ ಪ್ರವಾಸ ರದ್ದು ಪಡಿಸಿದ ಮುಖ್ಯಮಂತ್ರಿ ಕೃಷ್ಣ ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಎರಡನೇ ಕಂತಿನ ರೂಪುರೇಷೆಗಳನ್ನು ಪಾಲಿಕೆ ಅಧಿಕಾರಿಗೊಳೊಂದಿಗೆ ಮಂಗಳವಾರ ಪರಿಶೀಲಿಸಿದರು. ಮುಖ್ಯಮಂತ್ರಿಗಳ ಸಚಿವಾಲಯ ಬಿಡುಗಡೆ ಮಾಡಿದ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಲಾಗಿದೆ.
ಗೋಡೆ ಮೇಲೆ ಅಂಟಿಸಿರುವ ಚೀಟಿಗಳು- ಬರೆದಿರುವ ಬರಹಗಳನ್ನು ಅಳಿಸಿ, ಬ್ಯಾನರ್ಗಳನ್ನು ಕಿತ್ತೆಸೆದು, ಎಲ್ಲೂ ಕಸ ಕಾಣದಂತೆ ಜನವರಿ ತಿಂಗಳೊಳಗೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕೃಷ್ಣ ಆದೇಶಿಸಿದ್ದಾರೆ. ಬೆಳ್ಳಂದೂರು, ಅಲಸೂರು, ನಾಗವಾರ, ಯಡಿಯೂರು ಮತ್ತು ಕೆಂಪಾಂಬುಧಿ ಕೆರೆಗಳ ಅಭಿವೃದ್ಧಿಗೂ ಸಣ್ಣ ನೀರಾವರಿ ಇಲಾಖೆಯಾಂದಿಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ.
ಜನ ಹಾಗೂ ಮಾಧ್ಯಮಗಳು ಹೇಳಿದ್ದನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಕೃಷ್ಣ , ಬೆಂಗಳೂರು ಕಾರ್ಯ ಪಡೆಯ ಕೆಲಸವನ್ನು ಶ್ಲಾಘಿಸಿದ್ದಾರೆ. ಅದರ ಸಲಹೆಗಳನ್ನು ಅಧಿಕಾರಿಗಳು ಆಚರಣೆಗೆ ತರಬೇಕಷ್ಟೆ. ಪಾಲಿಕೆಯ ಶಾಲೆ ಹಾಗೂ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಲು ಖಾಸಗಿಯವರನ್ನೂ ತೊಡಗಿಸಿಕೊಳ್ಳಬೇಕು ಎಂದಿದ್ದಾರೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications